ಹಾಸನ: ವೇತನ ಹಿಂಬಾಕಿ, ಸಂಬಳ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರಕ್ಕಿಳಿದಿದ್ದಾರೆ. ಈ ಹಿನ್ನೆಲೆ ರಾಜ್ಯಾದ್ಯಂತ ಜನ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹಾಗೆ ಹಾಸನದಲ್ಲಿ ಖಾಸಗಿ ಬಸ್ ಗಳ ದರ್ಬಾರ್ ಶುರುವಾಗಿದ್ದು ಒನ್ ಟು ತ್ರಿಬಲ್ ಹಣ ಸುಲಿಗೆ ಮಾಡುತ್ತಿದ್ದಾರೆ.

ಜಿಲ್ಲೆಯಲ್ಲಿ ಬೆಳಗ್ಗೆ 6 ಗಂಟೆಯಿಂದಲೇ ಬಸ್‌ಗಳು ರಸ್ತೆಗಿಳಿಯದೇ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕೆಲಸಕ್ಕೆ ತೆರಳುವವರು ಬಸ್ ನಿಲ್ದಾಣದಲ್ಲೇ ಕಾದು ಕುಳಿತಿದ್ದಾರೆ. ಕೆಎಸ್‌ಆರ್‌ಟಿಸಿ ಘಟಕ-1 ಹಾಗೂ ಘಟಕ-2 ರಲ್ಲಿ 230 ಬಸ್‌ಗಳು ನಿಂತಿವೆ. ಅತ್ತ ಪ್ರಯಾಣಿಕರಿಗೆ ಹೊರೆ ತಪ್ಪಿಸಲು ಮುಂದಾಗಿರುವ ಖಾಸಗಿ ಬಸ್‌ಗಳು ನಿಲ್ದಾಣದ ಮುಂಭಾಗದಲೇ ನಿಂತಿವೆ.
ತುರ್ತು ಅಗತ್ಯಗಳಿಗೆ ಜನ ಖಾಸಗಿ ಬಸ್‌ಗಳ ಮೊರೆ ಹೋಗುತ್ತಿದ್ದಾರೆ. ಆದರೆ ಇವರು ಬೇಕಾಬಿಟ್ಟಿಯಂತೆ ಹಣ ವಸೂಲಿ ಮಾಡುತ್ತಿದ್ದು ಟಿಕೆಟ್ ದುಪ್ಪಟ್ಟು ಆಗಿದೆ.ಹಾಗೆ ವಿದ್ಯಾರ್ಥಿಗಳು ಶಾಲೆಗೆ ತೆರಳಲು , ಮಹಿಳೆಯರು ಕೆಲಸಕ್ಕೆ ಹೋಗಲು ಹಣ ದುಪ್ಪ್ಟು ಕೇಳುತ್ತಿದ್ದು ಖಾಸಗಿ ಬಸ್ ಸುಲಿಗೆಗೆ ಪ್ರಯಾಣಿಕರು ಪರದಾಡುವಂತಾಗಿದೆ.