ಚಿಕ್ಕಮಗಳೂರು: ಕೊಪ್ಪ ತಾಲೂಕಿನ ಅತ್ತಿಕುಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸರೀಕಟ್ಟೆಯಲ್ಲಿ ಪಂಚಾಯತಿಗೆ ಸೇರಿದ ಕಟ್ಟಡವು ಸರಿಯಾದ ನಿರ್ವಹಣೆ ಇಲ್ಲದೆ ಕಟ್ಟಡದ ಸುತ್ತಮುತ್ತ ಗಿಡಗಂಟಿಗಳು ಬೆಳೆಯುತ್ತಿವೆ.

ಈ ಕಟ್ಟಡದಲ್ಲಿ ಹೊನ್ನಗುಂಡಿ ವೃತ್ತದ ಗ್ರಾಮ ಲೆಕ್ಕಾಧಿಕಾರಿಗಳ ಕಛೇರಿಯೂ ಇದ್ದೂ, ಕಟ್ಟಡದ ಮೆಟ್ಟಿಲುಗಳು ಗಬ್ಬೆದ್ದು ಹೋಗಿದ್ದರು ಸರಿ ಮಾಡದೆ ಅದರಲ್ಲೆ ಕಾರ್ಯ ನಿರ್ವಹಿಸುತ್ತಿರುವುದು ಅತ್ತಿಕುಡಿಗೆ ಗ್ರಾಮ ಪಂಚಾಯತಿ ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂಬುದಕ್ಕೆ ಸಾಕ್ಷಿ ಎಂದು ಗ್ರಾಮಸ್ಥರು ದೂರಿದ್ದಾರೆ.
ವರದಿ: ಶಶಿ ಬೆತ್ತದಕೊಳಲು