ದಕ್ಷಿಣ ಕನ್ನಡ: ಧರ್ಮಸ್ಥಳದ ಸೌಜನ್ಯ ಮನೆಯ ಸಮೀಪ ಬಿಗ್ ಬಾಸ್ ರಜತ್ ಎಂಬುವರನ್ನು ನಾಲ್ವರು ಯೂಟ್ಯೂಬರ್ ಸಂದರ್ಶನ ಮಾಡುತ್ತಿದ್ದ ವೇಳೆ ಧರ್ಮಸ್ಥಳದ ಕೆಲವು ಅಪರಿಚಿತರು ದಾಳಿ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.

ಅಜಯ್ ಅಂಚನ್ , ಅಭಿಷೇಕ್ , ವಿಜಯ್ ಹಾಗೂ ಇನ್ನೋರ್ವ ಯೂಟ್ಯೂಬರ್ ಮೇಲೆ ಹಲ್ಲೆಗೆ ಓಳಗಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅಪರಿಚಿತರು ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಗಾಯಾಳುಗಳನ್ನ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರು ಸ್ಥಳಕ್ಕೆ ಬರುತ್ತಿದ್ದಂತೆ ಅಪರಿಚಿತರು ಪರಾರಿಯಾಗಿದ್ದಾರೆಂಬ ಮಾಹಿತಿ ಲಭ್ಯವಾಗಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು ಭಾರೀ ಜನ ಜಮಾಯಿಸಿದ್ದಾರೆ. ಸ್ಥಳದಲ್ಲಿ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.