ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ದಾರದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಸಿದ್ದ ಕೂಡಿಗೆ ಗ್ರಾಮದಲ್ಲಿ ನೂತನ ಸಮುದಾಯ ಭವನ ಕಟ್ಟಡದ ಗುದ್ದಲಿ ಪೂಜೆಯನ್ನು ಶಾಸಕಿ ನಯನಾ ಮೋಟಮ್ಮ ನೆರವೇರಿಸಿದರು
ಬಳಿಕ ಮಾತನಾಡಿದ ಶಾಸಕಿ ನಯನಾ ಮೋಟಮ್ಮ, ಕಾಮಗಾರಿಯಲ್ಲಿ ಗುಣಮಟ್ಟದ ಕಾಯ್ದುಕೊಳ್ಳುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಕಳಪೆ ಕಾಮಗಾರಿ ನಡೆಯದಂತೆ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸ್ಥಳೀಯರು ನೋಡಿಕೊಳ್ಳುವಂತೆ ತಿಳಿಸಿದರು.ಕ್ಷೇತ್ರದ ಪ್ರತಿ ಗ್ರಾಮಗಳಲ್ಲೂ ಅಭಿವೃದ್ಧಿ ಕಾರ್ಯ ಹಮ್ಮಿಕೊಳ್ಳಲಾಗುತ್ತಿದೆ. ಹಂತ ಹಂತವಾಗಿ ಪ್ರತಿ ಗ್ರಾಮಗಳ ಅಭಿವೃದ್ಧಿಗೆ ಮುಂದಾಗುವುದಾಗಿ ತಿಳಿಸಿದರು.
ಈ ವೇಳೆ ಮಾಜಿ ಸಚಿವೆ ಮೋಟಮ್ಮ,ಗ್ರಾಮ ಪಂಚಾಯತ್ ಮುಖ್ಯ ಕಾರ್ಯ ನಿರ್ವಣಾಧಿಕಾರಿ ಷರೀಫ್, ಗ್ರಾಮ ಪಂಚಾಯಿತಿ ಸದಸ್ಯ ಸಿದ್ದಯ್ಯ ಕೆಸವಳಲು, ಕಾಂಗ್ರೆಸ್ ಮುಖಂಡರಾದ ಶಂಕರ್ ಚಿಕ್ಕಳ, ಸುಕುಮಾರ್ ಕಡಿದಾಳ್, ಗುತ್ತಿಗೆದಾರ ಆರ್ಯ ಪಟೇಲ್ ಯುವ ಮುಖಂಡರಾದ ಗೌತಮ್ ಬೆಟ್ಟಗೆರೆ ಸೇರಿದಂತೆ ಹಲವು ಗ್ರಾಮಸ್ಥರು ಉಪಸ್ಥಿತರಿದ್ದರು.