ದಕ್ಷಿಣ ಕನ್ನಡ: ಧರ್ಮಸ್ಥಳ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಬಂಧ ಧರ್ಮಸ್ಥಳ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಧರ್ಮಸ್ಥಳ ಗ್ರಾಮ ಕನ್ಯಾಡಿ ನಿವಾಸಿ, ಜೀಪು ಚಾಲಕ ಸೋಮನಾಥ ಸಪಲ್ಯ (48) ಬಂಧಿತ ಆರೋಪಿ. ಸದ್ಯ ಆರೋಪಿಯನ್ನು ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ
ರ್ಮಸ್ಥಳ ವಿಚಾರದಲ್ಲಿ ಸುಳ್ಳುಸುದ್ದಿ ಹಬ್ಬಿಸುತ್ತಿದ್ದಾರೆಂದು ಆರೋಪಿಸಿ ಯೂಟ್ಯೂಬರ್‌ಗಳ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 150ಕ್ಕೂ ಅಧಿಕ ಜನರ ವಿರುದ್ಧ ಪ್ರತ್ಯೇಕ ಎಫ್‌ಐಆರ್ ದಾಖಲಾಗಿದೆ.
ಅಕ್ರಮ ಕೂಟ ಸೇರಿದ ಆರೋಪದಲ್ಲಿ ಪೊಲೀಸರು 3 ಸುಮೊಟೊ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಅದಲ್ಲದೆ ಪರಸ್ಪರ ಹಲ್ಲೆ ನಡೆಸಿದ ಆರೋಪದಡಿಯಲ್ಲಿ ನಾಲ್ಕು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಧರ್ಮಸ್ಥಳ ಗ್ರಾಮದ ಪ್ರಾಂಗಳದಲ್ಲಿ ಅಕ್ರಮ ಕೂಟ ಸೇರಿದ ಆರೋಪದಡಿ 2 ಎಫ್‌ಐಆರ್ ಹಾಗೂ ಬೆಳ್ತಂಗಡಿಯ ಉಜಿರೆ ಬೆನಕ ಆಸ್ಪತ್ರೆಯಲ್ಲಿ ಅಕ್ರಮ ಕೂಟ ಸೇರಿದ ಆರೋಪದಡಿ 1 ಎಫ್‌ಐಆರ್ ದಾಖಲಾಗಿದೆ.