ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಮತ್ತಿಕಟ್ಟೆ ಗ್ರಾಮದಲ್ಲಿ ಎರಡು ಕಾಡುಕೋಣಗಳು ರಸ್ತೆಯಲ್ಲಿ ಸಂಚರಿಸುತ್ತಿರುವ ದೃಶ್ಯ ಕಾಣಿಸಿಕೊಂಡಿದೆ.

ರಸ್ತೆ ಮೂಲಕ ಸಂಚರಿಸುತ್ತಿದ್ದ ಸಾರ್ವಜನಿಕರು ಈ ದೃಶ್ಯವನ್ನು ನೋಡಿ ಅಚ್ಚರಿಗೊಳಗಾದರು. ಕೆಲಕಾಲ ಕಾಡುಕೋಣಗಳು ರಸ್ತೆಯಲ್ಲಿ ಹಾಯಾಗಿ ನಡಿದಾಡಿದ ಬಳಿಕ ಸಮೀಪದ ಅರಣ್ಯ ಪ್ರದೇಶದತ್ತ ಹೋಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.
