Thursday, February 12, 2026
Homebig breakingಧರ್ಮಸ್ಥಳ ಯೂಟ್ಯೂಬರ್ ಮೇಲೆ ಹಲ್ಲೆ ಕೇಸ್: ಪೊಲೀಸರಿಂದ 6 ಜನರ ಬಂಧನ!

ಧರ್ಮಸ್ಥಳ ಯೂಟ್ಯೂಬರ್ ಮೇಲೆ ಹಲ್ಲೆ ಕೇಸ್: ಪೊಲೀಸರಿಂದ 6 ಜನರ ಬಂಧನ!

ದಕ್ಷಿಣ ಕನ್ನಡ: ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು 6 ಜನರನ್ನು ಬಂಧಿಸಿದ್ದಾರೆ.

ಪದ್ಮಪ್ರಸಾದ್, ಸುಹಾಸ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಚೇತನ್ ಬಂಧಿತ ಆರೋಪಿಗಳು. ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದ ಬಳಿಕ ನಡೆದ ಗುಂಪು ಘರ್ಷಣೆ ನಡೆದಿತ್ತು.

ಈ ಸಂದರ್ಭದಲ್ಲಿ ನಿಯಂತ್ರಣ ಮಾಡಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದರು. ಪೊಲೀಸ್‌ ಅಧಿಕಾರಿಯಿಂದ ದೂರು ದಾಖಲಾದ ಹಿನ್ನೆಲೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಆರೋಪಿಗಳನ್ನು ಹುಡುಕುತ್ತಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!