ಎನ್ ಆರ್ ಪುರ: ಯುವ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಶಾಲೆಯ ಮಕ್ಕಳಿಗೆ ನೋಟ್ ಬುಕ್ ಅನ್ನು ವಿತರಿಸಲಾಯಿತು.

ಹೌದು ..ಯುವ ಕಾಂಗ್ರೆಸ್ ಮುಖಂಡ ವಿಜಯ್ ಅವರ ನೇತೃತ್ವದಲ್ಲಿ ನರಸಿಂಹರಾಜಪುರ ಪಟ್ಟಣದ ಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ನೋಟ್ ಬುಕ್ ಅನ್ನು ವಿತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಜಿತ್ ದಂಡಿನಮಕ್ಕಿ, ಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ರತನ್ ಗೌಡ ಅರಗಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಮಂಜೇಶ್ ಬೀಳುವ, ನಾಗಲಾಪುರ ಪಂಚಾಯತ್ ಕಾಂಗ್ರೆಸ್ ಅಧ್ಯಕ್ಷರಾದ ಸುಜಿತ್ ಗೌಡ, ಯುವ ಕಾಂಗ್ರೆಸ್ ಮುಖಂಡರಾದ ಇಮ್ರಾನ್, ಹರೀಶ್, ವಿವೇಕ್, ನಿಶ್ಚಿತ್, ಸುಬ್ರಮಣ್ಯ, ಪ್ರವೀಣ್, ಸುಗಂತ್, ಪವನ್, ಜಮೀಲ್,ಸುದೀಪ್, ನಿತಿನ್, ಭೀಮಣ್ಣ, ಹಾಗೂ ಯುವ ಮಿತ್ರರು ಪಾಲ್ಗೊಂಡಿದ್ದಾರು.
