Friday, February 13, 2026
Homeಜಿಲ್ಲಾಸುದ್ದಿಶೃಂಗೇರಿಯಲ್ಲಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ, ವೈದ್ಯರ ಕೊರತೆ: ಬಿಜೆಪಿ ವತಿಯಿಂದ ಪ್ರತಿಭಟನೆ!

ಶೃಂಗೇರಿಯಲ್ಲಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ, ವೈದ್ಯರ ಕೊರತೆ: ಬಿಜೆಪಿ ವತಿಯಿಂದ ಪ್ರತಿಭಟನೆ!

ಚಿಕ್ಕಮಗಳೂರು: ಶೃಂಗೇರಿಯಲ್ಲಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಮತ್ತು ತಜ್ಞ ವೈದ್ಯರ ಕೊರತೆ ಹಿನ್ನೆಲೆಯಲ್ಲಿ ಇಂದು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತದೆ.

ಹೌದು .. ಮಾಜಿ ಸಚಿವ ಡಿ.ಎನ್‌. ಜೀವರಾಜ್‌ ಅವರು ಸಹ ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದು, ಸಮರ್ಪಕ ವೈದ್ಯರ ನಿಯೋಜನೆ ಸೇರಿದಂತೆ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಲಾಗಿದೆ.

ಇತ್ತೀಚೆಗೆ ಶೃಂಗೇರಿಯಲ್ಲಿ 100 ಬೆಡ್‌ ಆಸ್ಪತ್ರೆಯನ್ನು ನಿರ್ಮಿಸಲಾಗುವುದು ಎಂದು ಶಾಸಕ ರಾಜೇಗೌಡರು ತಿಳಿಸಿದ್ದರು ಆದರೆ ಇನ್ನೂ ಯಾವುದೇ ರೀತಿಯ ಕಾರ್ಯಗತವಾಗಿದೇ ಆ ಕೆಲಸ ಅಲ್ಲೇ ಉಳಿದಿದ್ದು ಇದು ಅಲ್ಲಿನ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ.

ಇದನ್ನೆಲ್ಲಾ ಗಮನಿಸಿದ ಅಲ್ಲಿನ ಸ್ಥಳಿಯ ಬಿಜೆಪಿ ಮುಖಂಡರು ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!