ಶಿವಮೊಗ್ಗ: ಬ್ಯಾಂಕಿನ ಶ್ರೇಷ್ಠ ಸಾಧನೆಗಾಗಿ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ. ಬೆಂಗಳೂರು ಇವರು ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಗಮವನ್ನು ಉತ್ತಮ ಡಿಸಿಸಿ ಬ್ಯಾಂಕ್ ಎಂದು ಆಯ್ಕೆ ಮಾಡಲಾಗಿದೆ.
ಇಂದು ನಡೆದ ವಾರ್ಷಿಕ ಮಹಾ ಸಭೆಯಲ್ಲಿ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಗಮ ಬೆಂಗಳೂರು ಇವರು ಪ್ರಶಸ್ತಿ ಪ್ರಧಾನ ಮಾಡಿದ್ದರು.
ಈ ವೇಳೆ ಶಿವಮೊಗ್ಗ ಡಿಸಿಸಿ ಬ್ಯಾಂಕಿನ ಪರವಾಗಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಆರ್.ಎಂ. ಮಂಜುನಾಥಗೌಡರು ಹಾಗೂ ಮುಖ್ಯ ಕಾರ್ಯನಿರ್ವಾಹಕರಾದ ಶ್ರೀ ಸಿ. ರಾಜಣ್ಣ ರೆಡ್ಡಿ ಇವರು ಪ್ರಶಸ್ತಿಯನ್ನು ಸ್ವೀಕರಿಸಿದರು.
ಹಾಗೆ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅಧ್ಯಕ್ಷರಾದ ಡಾ. ಆರ್.ಎಂ.ಮಂಜುನಾಥಗೌಡರು ಬ್ಯಾಂಕಿಗೆ ಸಂದ ಈ ಗೌರವವು ಜಿಲ್ಲೆಯ ರೈತರಿಗೆ ಹಾಗೂ ಗ್ರಾಹಕರಿಗೆ ಸಂದ ಗೌರವವಾಗಿದೆ ಎಂದು ತಿಳಿಸಿ ಬ್ಯಾಂಕಿನ ಸಾಧನೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಿದ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ. ಬೆಂಗಳೂರು ಇದರ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು
