ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ನಟ ದರ್ಶನ್ಗೆ ಬಿಗ್ ಶಾಕ್ ಎದುರಾಗಿದೆ. ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್ನ ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್ ಜೈಲು ಸೇರಬೇಕಾದ ಪರಿಸ್ಥಿತಿ ಬಂದಿದೆ. ದರ್ಶನ್ ವೃತ್ತಿ ಜೀವನದ ಮೇಲೆ ಈ ತೀರ್ಪು ತುಂಬಾನೇ ಪ್ರಭಾವ ಬೀರಲಿದೆ.
ಕಳೆದ ವರ್ಷ ಜೂನ್ 11ರಂದು ದರ್ಶನ್ ಬಂಧನಕ್ಕೆ ಒಳಗಾದರು. ಆ ಬಳಿಕ ನಾಲ್ಕು ತಿಂಗಳಿಗೂ ಅಧಿಕ ಸಮಯ ಅವರು ಜೈಲಿನಲ್ಲಿ ಇರಬೇಕಾದ ಸ್ಥಿತಿ ಬಂದೊದಗಿತ್ತು. ಆ ಬಳಿಕ ಬೆನ್ನು ನೋವಿನ ಕಾರಣ ನೀಡಿ ಜೈಲಿನಿಂದ ಹೊರ ಬಂದರು. ಡಿಸೆಂಬರ್ನಲ್ಲಿ ಅವರಿಗೆ ಸಂಪೂರ್ಣ ಜಾಮೀನು ದೊರೆಯಿತು. ಇದನ್ನು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಬಳಿ ಪ್ರಶ್ನೆ ಮಾಡಿತ್ತು.
