Thursday, February 12, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು: ಇಂದು 79ನೇ ಸ್ವಾತಂತ್ರೋತ್ಸವ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌ ನೇತೃತ್ವದಲ್ಲಿ ಧ್ವಜಾರೋಹಣಾ

ಚಿಕ್ಕಮಗಳೂರು: ಇಂದು 79ನೇ ಸ್ವಾತಂತ್ರೋತ್ಸವ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌ ನೇತೃತ್ವದಲ್ಲಿ ಧ್ವಜಾರೋಹಣಾ

ಚಿಕ್ಕಮಗಳೂರು: ಜಿಲ್ಲಾಡಳಿತ ವತಿಯಿಂದ ಇಂದು 79ನೇ ಸ್ವಾತಂತ್ರೋತ್ಸವ, ನಗರದ ನೇತಾಜಿ ಸುಭಾಶ್‌ ಚಂದ್ರ ಬೋಸ್‌ ಜಿಲ್ಲಾ ಆಟದ ಮೈದಾನದಲ್ಲಿ ನಡೆಯುವ ಸ್ವಾತಂತ್ರೋತ್ಸವಕ್ಕೆ ಭರದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ.ಜಾರ್ಜ್‌ ನೇತೃತ್ವದಲ್ಲಿ ಧ್ವಜಾರೋಹಣಾ ನೆರವೇರಿಸಲಿದ್ದಾರೆ.

ಚಿಕ್ಕಮಗಳೂರು: ಟೌನ್ ಕೋ-ಆಪರೇಟಿವ್ ಸೊಸೈಟಿ ನೂತನ ಕಟ್ಟಡಕ್ಕೆ ಎಂ.ಜಿ ರಸ್ತೆಯಲ್ಲಿರುವ ನಿವೇಶನದಲ್ಲಿ ಆ.15 ರಂದು ಶುಕ್ರವಾರ ಶಂಕುಸ್ಥಾಪನೆ ಹಾಗೂ ಸರ್ವ ಸದಸ್ಯರ ಸಭೆಯನ್ನು ಆಯೋಜಿಸಲಾಗಿದೆ ಎಂದು ಸೊಸೈಟಿ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಚಿಕ್ಕಮಗಳೂರು ಟೌನ್ ಕೋ-ಆಪರೇಟಿವ್ ಸೊಸೈಟಿ ಜನಸ್ನೇಹಿ ಆಡಳಿತ ನೀಡುವ ಉದ್ದೇಶದೊಂದಿಗೆ ಸುಮಾರು 1.50 ಕೋಟಿ ರೂ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಅಂದು ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಹೇಳಿದರು.

ಕಳೆದ ಡಿಸೆಂಬರ್‌ನಲ್ಲಿ ನಡೆದ ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದಂತೆ ನಮ್ಮ ತಂಡ ಅಧಿಕಾರಕ್ಕೆ ಬಂದರೆ ಜನಸ್ನೇಹಿ ಸಹಕಾರಿ ಸಂಘವನ್ನು ನಡೆಸಲಾಗುತ್ತಿದೆ. ಅದರಂತೆ ಕಳೆದ ಆರು ತಿಂಗಳಿನಿಂದ ನಿರಂತರವಾಗಿ ಸದಸ್ಯರಿಗೆ ಡಿಜಿಟಲೀಕರಣ ಮಾಡಿ ಮೊಟ್ಟ ಮೊದಲ ಬಾರಿಗೆ ಸಹಕಾರಿ ಆಪ್ ಪರಿಚಯಿಸಲಾಗಿದೆ ಎಂದು ಹೇಳಿದರು.

ಷೇರುದಾರರ ಬೆರಳು ತುದಿಯಲ್ಲಿ ಮೊಬೈಲ್‌ನಿಂದ ವ್ಯವಹಾರದ ಮಾಹಿತಿಯನ್ನು ವೀಕ್ಷಿಸಲು ಅನುಕೂಲ ಮಾಡಿದ್ದು, ಈಗಾಗಲೇ ಎಸ್‌ಎಂಎಸ್ ಸೇವೆಯನ್ನು ರವಾನಿಸಲು ಸಿದ್ದತೆ ನಡೆಯುತ್ತಿವೆ. ಕಚೇರಿ ಡಿಜಿಟಲೀಕರಣಗೊಳಿಸಿರುವ ಬಗ್ಗೆ ಷೇರುದಾರರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆಂದು ಮಾಹಿತಿ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!