Wednesday, July 8, 2026
Homeಜಿಲ್ಲಾಸುದ್ದಿ‌ಚಿಕ್ಕಮಗಳೂರು: ಜೈನ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲ ಕಮೆಂಟ್: ಆರೋಪಿ ಅರೆಸ್ಟ್!

‌ಚಿಕ್ಕಮಗಳೂರು: ಜೈನ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲ ಕಮೆಂಟ್: ಆರೋಪಿ ಅರೆಸ್ಟ್!

Telegram Group
Join Now

ಚಿಕ್ಕಮಗಳೂರು: ಯಾರದ್ದೂ ಪೋಸ್ಟ್‌ಗೆ ಕಮೆಂಟ್ ಹಾಕಿ ಜೈಲು ಸೇರಿದ ಕರ್ನಾಟಕ ಮೊದಲ ಪ್ರಕರಣ ಚಿಕ್ಕಮಗಳೂರಿನಲ್ಲಿ ನಡೆದಿದೆ. ಧರ್ಮಸ್ಥಳ ಪ್ರಕರಣದ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಹಲವು ಪೋಸ್ಟ್, ಬರಹ, ವಿಡಿಯೋಗಳು ಹರಿದಾಡುತ್ತಿದೆ. ಹೀಗೆ ಯಾರದ್ದೋ ಪೋಸ್ಟ್‌ಗೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಯುವಕ ಉಮೇಶ್ ಗೌಡ ಅಶ್ಲೀಲವಾಗಿ ಕಮೆಂಟ್ ಮಾಡಿದ್ದಾರೆ. ಪ್ರಮುಖವಾಗಿ ಜೈನ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲ ಕಮೆಂಟ್ ಮಾಡಿದ ಉಮೇಶ್ ಗೌಡ ಅರೆಸ್ಟ್ ಆಗಿದ್ದಾನೆ.

ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಪೋಸ್ಟ್ ಮಾಡಲಾಗಿತ್ತು. ಈ ಪೋಸ್ಟ್‌ಗೆ ಉಮೇಶ್ ಗೌಡ ಕಮೆಂಟ್ ಮಾಡಿದ್ದಾನೆ. ಜೈನ ಸಮುದಾಯದ ಹೆಣ್ಣು ಮಕ್ಕಳನ್ನು ಅವಹೇಳನ ಮಾಡಿದ್ದಾನೆ. ಅತ್ಯಂತ ಕೆಟ್ಟ ಕಮೆಂಟ್ ಮಾಡಿ ವಿಕೃತಿ ಮೆರೆದಿದ್ದಾನೆ. ಆಗಸ್ಟ್ 2 ರಂದು ಉಮೇಶ್ ಗೌಡ ಅಶ್ಲೀಲ ಕಮೆಂಟ್ ಮಾಡಿದ್ದಾನೆ. ಜೈನ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿ ಕಮೆಂಟ್‌ಗೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಕೇವಲ ಜೈನ ಸಮುದಾಯದ ಮಾತ್ರವಲ್ಲ, ಹಲವರು ಈ ಕಮೆಂಟ್‌ಗೆ ಆಕ್ಷೇಪ ವ್ಯಕ್ತಪಡಿಸಿದ್ದರು.

ಕಮೆಂಟ್ ಕುರಿತು ಭಾರಿ ವಿರೋಧ ವ್ಯಕ್ತವಾಗುತ್ತಿದ್ದಂತೆ ಪೊಲೀಸರು ಬಿ.ಎನ್.ಎಸ್. ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ನಬಿ.ಎನ್.ಎಸ್. ಕಾಯ್ದೆಯ 196 (1) ಹಾಗೂ 353 (2) ಅಡಿ ಪ್ರಕರಣ ದಾಖಲಿಸಿದ್ದಾರೆ. ಬಳಿಕ ಉಮೇಶ್ ಗೌಡನಿಗಾಗಿ ಹುಡುಕಾಡಿದ ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments