Wednesday, July 8, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು: ಜಿಲ್ಲೆಯಲ್ಲಿ ಮತ್ತೆ ಮಳೆರಾಯನ ಆರ್ಭಟ: ಸೋಮವಾರ ಆರು ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ!

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮತ್ತೆ ಮಳೆರಾಯನ ಆರ್ಭಟ: ಸೋಮವಾರ ಆರು ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ!

Telegram Group
Join Now

ಚಿಕ್ಕಮಗಳೂರು : ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಮುಂದುವರೆದಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳು ಅಕ್ಷರಶಃ ವರುಣನ ಹೊಡೆತಕ್ಕೆ ತತ್ತರಿಸಿ ಹೋಗಿವೆ.ನಿರಂತರವಾಗಿ ಸುರಿಯುತ್ತಿರುವ ಮಹಾಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಈ ಹಿನ್ನೆಲೆಯಲ್ಲಿ ಮಲೆನಾಡು ಭಾಗದ ಆರು ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ನೀಡಿದ್ದಾರೆ.

ಹೌದು ಭಾರೀ ಮಳೆಯಿಂದಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ನೀಡಿದ್ದು ಕೊಪ್ಪ, ಶೃಂಗೇರಿ, ಮೂಡಿಗೆರೆ, ಎನ್ ಆರ್.ಪುರ, ಕಳಸ ತಾಲೂಕಿನಲ್ಲಿ ರಜೆ ನೀಡಲಾಗಿದ್ದು ಹಾಗೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು, ವಸ್ತಾರೆ, ಖಾಂಡ್ಯ, ಆವತಿ, ಜಾಗರ ಹೋಬಳಿಗಳಿಗೆ ಸಹ ರಗೆ ಗೋಷಣೆ ಮಾಡಲಾಗಿದೆ.

ಜಿಲ್ಲೆಯಲ್ಲಿ ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಣೆ‌ಯಾಗಿತ್ತುಹಾಗೆ ಪಶ್ಚಿಮ ಘಟ್ಟ ಹಾಗೂ ಮಲೆನಾಡು ಭಾಗದಲ್ಲಿ ಅಬ್ಬರಿಸ್ತಿರೋ ಮಳೆರಾಯ ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಅವರು ನಾಳೆ ಒಂದು ದಿನ ರಜೆ ಘೋಷಣೆ ಮಾಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments