Wednesday, July 8, 2026
Homeಜಿಲ್ಲಾಸುದ್ದಿಶೃಂಗೇರಿ: ಮಳೆ ಅಬ್ಬರ: ಬೈಪಾಸ್ ರಸ್ತೆ ಧರೆಕುಸಿತದಿಂದ ಸಂಪೂರ್ಣ ಸಂಚಾರ ಅಸ್ತವ್ಯಸ್ತ!

ಶೃಂಗೇರಿ: ಮಳೆ ಅಬ್ಬರ: ಬೈಪಾಸ್ ರಸ್ತೆ ಧರೆಕುಸಿತದಿಂದ ಸಂಪೂರ್ಣ ಸಂಚಾರ ಅಸ್ತವ್ಯಸ್ತ!

Telegram Group
Join Now

ಶೃಂಗೇರಿ: ತಾಲೂಕಿನಲ್ಲಿ  ಸುರಿದ ಭಾರಿ ಮಳೆಗೆ ಭಾನುವಾರ ತುಂಗಾನದಿಯಲ್ಲಿ ಪ್ರವಾಹ ಉಂಟಾಗಿದೆ. ಹಾಗೆ ಕುಂಚೆಬೈಲು, ತೆಕ್ಕೂರು ಮಾರ್ಗವಾಗಿ ನೆಮ್ಮಾರ್ ಕಾರ್ಕಳ ಮಂಗಳೂರು ಸಂಪರ್ಕಿಸುವ ಬೈಪಾಸ್ ರಸ್ತೆ ಧರೆಕುಸಿತದಿಂದ ಸಂಪೂರ್ಣ ಸಂಚಾರ ಅಸ್ತವ್ಯಸ್ತಗೊಂಡಿದೆ.

ಪ್ರವಾಹ ಉಂಟಾಗಿದ್ದರಿಂದ ಶೃಂಗೇರಿಯ ಶಾರದಾ ಪೀಠದ ದರ್ಶನ ಪಡೆಯಲು ಭಾನುವಾರ ಬಂದಿದ್ದ ಪ್ರವಾಸಿಗರಿಗೆ ಮಳೆಯಿಂದ ತೊಂದರೆಯಾಯಿತು. ಶಾರದಾ ಪೀಠದ  ಭಾರತೀತೀರ್ಥ ಸ್ವಾಮೀಜಿಯವರ ಸ್ನಾನಘಟ್ಟ ಹಾಗೂ ಸಂಧ್ಯಾವಂದನೆ ಮಂಟಪ ಮುಳುಗಿದೆ. ನದಿಯ ಪ್ರವಾಹದಲ್ಲಿ ಕಾಳಿಂಗ ಸರ್ಪದಂತಹ ಜೀವ ಜಂತುಗಳು, ಮರದ ದಿಮ್ಮಿಗಳು ತೇಲಿ ಹೋದವು.

ತಾಲ್ಲೂಕಿನ ಜಲಪಾತಗಳಾದ ನರಸಿಂಹ ಪರ್ವತದ ಎರಡು ಕೊಳಗಳು, ಬರ್ಕಣ, ಸಿರಿಮನೆ, ಸೂತನಬ್ಬಿ ಮುಂತಾದ ಜಲಪಾತಗಳು ಉಕ್ಕಿ ಹರಿಯುತ್ತಿದೆ.

ಮಳೆಯಿಂದ ನೆಮ್ಮಾರ್, ಕೆರೆಕಟ್ಟೆ, ಕುರಬಕೇರಿ, ಭಾರತೀತೀರ್ಥ ರಸ್ತೆ, ಗಾಂಧಿ ಮೈದಾನ, ವಿದ್ಯಾರಣ್ಯಪುರ ರಸ್ತೆ, ಕಿಕ್ರೆ ಹಳ್ಳ ಸೇತುವೆ ಮೇಲೆ, ಕೆರೆಕಟ್ಟೆಯ ಗುಲುಗುಂಜಿ ಮನೆ ರಸ್ತೆ ನೀರಿನಿಂದ ತುಂಬಿ ವಾಹನ ಸಂಚಾರಕ್ಕೆ ತಡೆ ಉಂಟಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments