ಜಯಪುರ: ರಾಜ್ಯದ ಪ್ರತಿಷ್ಠಿತ ಹಾಲು ಉತ್ಪಾದಕರ ಒಕ್ಕೂಟದ ಉತ್ಪನ್ನಗಳ ಮಳಿಗೆ ಇಂದು ಜಯಪುರ ಬಸ್ ನಿಲ್ದಾಣದ ಬಳಿ ನೂತನವಾಗಿ ಆರಂಭಗೊಂಡಿದೆ.

ಹಾಸನ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನಂದಿನಿ ಮಿಲ್ಕ್ ಪಾರ್ಲರನ್ನು ಜಯಪುರ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶಿವಕುಮಾರ್ ಹಾಗೂ ಜಯಪುರ ಠಾಣಾಧಿಕಾರಿ ಅಂಬರೀಶ್ ಉದ್ಘಾಟಿಸಿದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಜಯಪುರ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಕರುಣಾಕರ, ಗ್ರಾಮ ಪಂಚಾಯತಿ ಸದಸ್ಯರಾದ ಶ್ರೀನಿವಾಸ್, ಹರಿಹರಪುರ ಗ್ರಾಮ ಪಂಚಾಯತಿ ಸದಸ್ಯ ವೆಂಕಟೇಶ್, ಹೇರೂರು ಪಿಎಸಿಎಸ್ ಅಧ್ಯಕ್ಷ ಕೆಪಿ ರಂಗಪ್ಪಗೌಡ, ಕೃಷಿಕರಾದ ಮಳಿಗೆ ಚಂದ್ರಶೇಖರ್, ಕಿಬ್ಳಿ ಪ್ರಸನ್ನ ಕುಮಾರ್, ನಂದಿನಿ ಮಾರ್ಕೆಟಿಂಗ್ ವಿಭಾಗದ ಮುಖ್ಯಸ್ಥರಾದ ರವಿಶಂಕರ್ ಹಾಗೂ ಇತರರಿದ್ದರು.
