Monday, June 29, 2026
Homeಜಿಲ್ಲಾಸುದ್ದಿಹಾಸನ: ರೀಲ್ಸ್ ಹುಚ್ಚಿಗೆ ಟ್ರ‍್ಯಾಕ್ಟರ್ ಪಲ್ಟಿಯಾಗಿ ಯುವಕ ಸಾವು!

ಹಾಸನ: ರೀಲ್ಸ್ ಹುಚ್ಚಿಗೆ ಟ್ರ‍್ಯಾಕ್ಟರ್ ಪಲ್ಟಿಯಾಗಿ ಯುವಕ ಸಾವು!

ಹಾಸನ: ರೀಲ್ಸ್ ಮಾಡಲು ಹೋಗಿ ಟ್ರ‍್ಯಾಕ್ಟರ್ ಪಲ್ಟಿಯಾಗಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕಬ್ಬಳ್ಳಿಗೆರೆ ಬೆಟ್ಟದಲ್ಲಿ ನಡೆದಿದೆ.

ವಿ.ಜಿ.ಕೊಪ್ಪಲು ಗ್ರಾಮದ ಕಿರಣ್ (19) ರೀಲ್ಸ್ ಹುಚ್ಚಿಗೆ ಬಲಿಯಾದ ಯುವಕ. ರೀಲ್ಸ್ಗಾಗಿ ಕಿರಣ್ ವೇಗವಾಗಿ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದ. ಈ ವೇಳೆ ಬೆಟ್ಟದ ತಿರುವಿನಲ್ಲಿ ವೇಗವಾಗಿ ಬಂದ ಟ್ರ್ಯಾಕ್ಟರ್ ನಿಯಂತ್ರಣಕ್ಕೆ ಸಿಗದೆ ಪಲ್ಟಿಯಾಗಿದೆ.

ಪಲ್ಟಿಯಾದ ರಭಸಕ್ಕೆ ಕಿರಣ್ ಮೇಲೆಯೇ ಟ್ರ್ಯಾಕ್ಟರ್ ಉರುಳಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಕೊಣನೂರು ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments