ಚಿಕ್ಕಮಗಳೂರು: ಕಾಫಿನಾಡು ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ದಿನ ದಿನಕ್ಕೂ ಹೆಚ್ಚಾಗುತ್ತಿದ್ದು ತಾಲೂಕಿನ ಕಣತಿ ಸಮೀಪದ ಐದಳ್ಳಿ ಗ್ರಾಮದಲ್ಲಿ ಒಂಟಿ ಸಲಗವೊಂದು ಕೃಷಿ ಜಮೀನುಗಳಿಗೆ ಪ್ರತಿನಿತ್ಯ ದಾಳಿ ಇಡುತ್ತಿತ್ತು ಅಪಾರ ಹಾನಿ ಉಂಟು ಮಾಡಿದೆ.
ಆನೆಗಳು ಕೃಷಿ ಜಮೀನಿಗೆ ದಾಳಿ ಇಡುವ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಗಳು ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗುತ್ತಿಲ್ಲ. ರಾತ್ರಿ ವೇಳೆ ಬೆಳೆಗಳನ್ನು ನಾಶ ಮಾಡುವ ವೇಳೆ ಅರಣ್ಯ ಸಿಬ್ಬಂದಿಗಳಿಗೆ ಕರೆ ಮಾಡಿದರೆ ಈಗ ಆಗಲ್ಲ ನಾವು ಬೆಳಗ್ಗೆ ಸಿಬ್ಬಂದಿಗಳನ್ನು ಕಳುಹಿಸುತ್ತೇವೆ ಎಂದು ಉಡಾಫೆ ಉತ್ತರ ಕೊಡುತ್ತಾರೆ. ಹೀಗಾಗಿ ಗ್ರಾಮಸ್ಥರು ಅರಣ್ಯ ಇಲಾಖೆ ಸಿಬ್ಬಂದಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಿರಂತರವಾಗಿ ಕಾಡಾನೆಗಳು ದಾಳಿ ನಡೆಸುತ್ತಿರುವ ಗ್ರಾಮದಲ್ಲಿ ಅಪಾರ ನಷ್ಟ ಉಂಟಾಗುತ್ತಿದೆ ಹೀಗಾಗಿ ಬೇಸತ್ತು ಜನರು ಕೃಷಿ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಪುಂಡಾಟ ಮೆರೆಯುತ್ತಿರುವ ಸ್ಥಳಾಂತರ ಮಾಡದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
