Saturday, September 26, 2026
Homeಜಿಲ್ಲಾಸುದ್ದಿಸಕಲೇಶಪುರ: ಧರ್ಮಸ್ಥಳದ ವಿರುದ್ಧ ಅಪಪ್ರಚಾರ : ಸಿಬಿಐ ತನಿಖೆಗೆ ಶಾಸಕ ಸಿಮೆಂಟ್ ಮಂಜು ಒತ್ತಾಯ

ಸಕಲೇಶಪುರ: ಧರ್ಮಸ್ಥಳದ ವಿರುದ್ಧ ಅಪಪ್ರಚಾರ : ಸಿಬಿಐ ತನಿಖೆಗೆ ಶಾಸಕ ಸಿಮೆಂಟ್ ಮಂಜು ಒತ್ತಾಯ

Telegram Group
Join Now

ಸಕಲೇಶಪುರ : ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರದ ವಿಚಾರವಾಗಿ ರಾಜ್ಯ ಸರ್ಕಾರದ ನಿಲುವನ್ನು ತೀವ್ರವಾಗಿ ಖಂಡಿಸಿದ ಶಾಸಕ ಸಿಮೆಂಟ್ ಮಂಜು, “ಧರ್ಮದ ಉಳಿವಿಗಾಗಿ ಧರ್ಮಯುದ್ಧ ಹೋರಾಟ” ನಡೆಸುವುದಾಗಿ ಘೋಷಣೆ ಮಾಡಿದ್ದಾರೆ.

ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಒಂದು ವಾರದವರೆಗೂ ಪ್ರತಿಭಟನೆ ನಡೆಸುವ ಕುರಿತು ರಾಜ್ಯ ನಾಯಕತ್ವದಿಂದಲೇ ಸೂಚನೆ ಬಂದಿದೆ ಎಂದು ಅವರು ತಿಳಿಸಿದ್ದಾರೆ.

ಕಳೆದ ತಿಂಗಳಿನಿಂದ ಧರ್ಮಸ್ಥಳ ವಿಚಾರದಲ್ಲಿ ನಡೆದ ಬೆಳವಣಿಗೆಗಳ ಕುರಿತು ಮಾತನಾಡಿದ ಶಾಸಕ, “ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದಾಗ ಅದನ್ನು ಸ್ವಾಗತಿಸಿದ್ದೇವೆ. ಈಗ ತನಿಖೆ ಪಾರದರ್ಶಕವಾಗಿಯೂ ಸಮಗ್ರವಾಗಿಯೂ ನಡೆಯಬೇಕು. ಈಗಾಗಲೇ ಮಹೇಶ್ ಶೆಟ್ಟಿ ತಿಮ್ಮರೋಡಿ ಹಾಗೂ ಮುಸುಕದಾರಿಯನ್ನು ಬಂಧಿಸಿರುವುದು ಉತ್ತಮ. ಆದರೆ, ಇಡೀ ರಾಜ್ಯದಲ್ಲಿ ಅಶಾಂತಿ ಸೃಷ್ಟಿಸಿದ ಯೂಟ್ಯೂಬರ್ ಸಮೀರ್‌ನ್ನು ಮೊದಲು ಬಂಧಿಸಿ ವಿಚಾರಣೆ ನಡೆಸಬೇಕು. ಇದರಿಂದ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ಬಹಿರಂಗವಾಗುತ್ತದೆ” ಎಂದು ಒತ್ತಾಯಿಸಿದರು.

ರಾಜ್ಯಾದ್ಯಂತ ಧರ್ಮಯುದ್ಧ ಹೋರಾಟಕ್ಕೆ ಸಿಮೆಂಟ್ ಮಂಜು ಕರೆ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!