ಚಿಕ್ಕಮಗಳೂರು: ಮಲೆನಾಡ ಗಾಂಧಿ ಎಂದೇ ಹೆಸರಾಗಿದ್ದ ಮಾಜಿ ಸಚಿವ ದಿ.ಹೆಚ್.ಜಿ. ಗೋವಿಂದೇಗೌಡರ ಮನೆಯಲ್ಲಿ 6 ಲಕ್ಷ ನಗದು ಮತ್ತು 37.50 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂರು ಜನ ನೇಪಾಳದ ಆರೋಪಿಗಳನ್ನು ಮಹಾರಾಷ್ಟ್ರ ಪೊಲೀಸರ ಸಹಕಾರದೊಂದಿಗೆ ಬಂಧಿಸಿದ್ದಾರೆ.

ಹೌದು ..ಕಳೆದ ಗುರುವಾರ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಹರಂದೂರು ಗ್ರಾಮದ ಮಣಿಪುರ ಎಸ್ಟೇಟ್‌ನ ಮಾಲೀಕ ಎಚ್.ಜಿ. ವೆಂಕಟೇಶ್ ಮನೆಯಲ್ಲಿ 6 ಲಕ್ಷ ನಗದು ಮತ್ತು 37.50 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳನ್ನು ಕಳವು ಮಾಡಿದ್ದ ಮೂರು ಜನ ನೇಪಾಳದ ಆರೋಪಿಗಳಾದ ರಾಜೇಂದ್ರ ಶೇರ್ ಬಾಯ್ (30), ಏಕೇಂದ್ರ ಕುಟಲ್ ಬದ್ವಾಲ್ (31) ಕರಂ ಸಿಂಗ್ ಬಹದ್ದೂರ್ ದಾಮಡಿ ಇವರುಗಳನ್ನ ಬಂಧಿಸಿದ್ದಾರೆ.
ಆರೋಪಿಗಳಿಂದ 1.5 ಕೋಟಿ ಮೌಲ್ಯದ 1 ಕೆಜಿ 800 ಗ್ರಾಂ.ತೂಕದ ಚಿನ್ನ, 1 ಕೆಜಿ 200 ಗ್ರಾಂ ತೂಕದ ಬೆಳ್ಳಿ ಆಭರಣಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಎರಡು ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ.
ಇನ್ಜು ಈ ಕಾರ್ಯಚಾರಣೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕೆ.ಟಿ.ಜಯಕುಮಾರ್ ರವರ ನೇತೃತ್ವದಲ್ಲಿ ಎರಡು ಪ್ರತ್ಯೇಕ ತಂಡಗಳನ್ನು ರಚನೆ ಮಾಡಿ ಚಿಕ್ಕಮಗಳೂರು ಸೆನ್ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ತಿಪ್ಪೇಸ್ವಾಮಿ, ಸೆನ್ ಠಾಣೆ ಪಿಎಸ್‌ಐ ಖಾದರ್, ಹರೀಶ್ ಸಿಪಿಸಿ-196. ರಮೇಶ ಸಿ.ಪಿ.ಸಿ.468 ಹಾಗೂ ಕೊಪ್ಪ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಬಾಲಾಜಿಸಿಂಗ್, ಪಿ.ಎಸ್.ಐ ಬಸವರಾಜ ಜಿ.ಕೆ ಹಾಗೂ ಹೆಚ್ ಸಿ 150 ತಿಪ್ಪೇಶ, ಪಿ.ಸಿ.628 ಯುವರಾಜ, ಪಿ.ಸಿ.701 ಪ್ರಕಾಶ ಒಳಗೊಂಡ ಪೊಲೀಸ್ ಅಧಿಕಾರಿ ಸಿಬ್ಬಂದಿಯವರು ಇದ್ದರು.
ವರದಿ: ವಿಠ್ಠಲ್ ಶೃಂಗೇರಿ
