Wednesday, February 11, 2026
Homeಉದ್ಯೋಗಚಿಕ್ಕಮಗಳೂರು: ಕೃಷಿ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಚಿಕ್ಕಮಗಳೂರು: ಕೃಷಿ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಚಿಕ್ಕಮಗಳೂರು: ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಜಿಲ್ಲೆಯ ಕೊಪ್ಪ ಹಾಗೂ ಶೃಂಗೇರಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು(ಬಿಟಿಎಂ) ಮತ್ತು ಶೃಂಗೇರಿ ತಾಲ್ಲೂಕಿನ ಕಿಗ್ಗಾ ಹೋಬಳಿಯ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ(ಎಟಿಎಂ) ಹುದ್ದೆಗಳ ತಾತ್ಕಾಲಿಕ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಿಂದ ಅರ್ಜಿ ಪಡೆದು ಭರ್ತಿ ಮಾಡಿ ಸೆ.6ರ ಸಂಜೆ 5.30ರೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಆತ್ಮ ಉಪ ಯೋಜನಾ ನಿರ್ದೇಶಕರನ್ನು(8147899207) ಸಂಪರ್ಕಿಸಬಹುದು

ನೇರ ಸಂದರ್ಶನ:  ಖಾಸಗಿ ಕಂಪನಿಯಾದ ರಾಯಲ್ ಎನ್‌ಫೀಲ್ಡ್ ಚಿಕ್ಕಮಗಳೂರು ಮೋಟರ್ಸ್‌ನಲ್ಲಿ ಖಾಲಿ ಇರುವ ಸರ್ವಿಸ್ ಟೆಕ್ನಿಷಿಯನ್, ಸೇಲ್ಸ್ ಎಕ್ಸಿಕ್ಯುಟಿವ್, ಪಿಒಐ ಇನ್‌ಚಾರ್ಜ್ ಹಾಗೂ ವಾಷಿಂಗ್ ಬಾಯ್ ಹುದ್ದೆಗಳಿಗೆ ಆ.26 ರಂದು ಬೆಳಿಗ್ಗೆ 10.30 ಗಂಟೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ.

ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ 18 ರಿಂದ 30 ವರ್ಷ ವಯೋಮಿತಿಯ ಪುರುಷ ಅಭ್ಯರ್ಥಿಗಳು ಮಾತ್ರ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವನ್ನು(08262-295538/9945198500) ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!