Thursday, July 9, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು: ಕರ್ನಾಟಕ ವಿಧಾನ ಪರಿಷತ್‌ ಗೆ ಶೃಂಗೇರಿ ಕ್ಷೇತ್ರದ ಡಾ. ಆರತಿ ಕೃಷ್ಣ ಹೆಸರು ಫೈನಲ್

ಚಿಕ್ಕಮಗಳೂರು: ಕರ್ನಾಟಕ ವಿಧಾನ ಪರಿಷತ್‌ ಗೆ ಶೃಂಗೇರಿ ಕ್ಷೇತ್ರದ ಡಾ. ಆರತಿ ಕೃಷ್ಣ ಹೆಸರು ಫೈನಲ್

Telegram Group
Join Now

ರಾಜ್ಯದಲ್ಲಿ ಖಾಲಿ ಇರುವ ಕರ್ನಾಟಕ ವಿಧಾನ ಪರಿಷತ್‌ನ ನಾಲ್ಕು ಖಾಲಿ ಸ್ಥಾನಗಳಿಗೆ ಹೆಸರುಗಳನ್ನ ಅಂತಿಮಗೊಳಿಸಲಾಗಿದ್ದು 7 ತಿಂಗಳ ಹಗ್ಗ ಜಗ್ಗಾಟ ಬಳಿಕ ಕಡೆಗೂ ಅಸ್ತು ಎಂದಿದೆ. ಇನ್ನೂ ಕಾಂಗ್ರೆಸ್ ನಿಂದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕ್ಷೇತ್ರದ ಆರತಿ ಕೃಷ್ಣರನ್ನು ವಿಧಾನ ಪರಿಷತ್ ಗೆ ನಾಮ ನಿರ್ದೇಶನ ಮಾಡಲು ಕಾಂಗ್ರೆಸ್ ಹೈಕಮ್ಯಾಂಡ್ ಒಪ್ಪಿಗೆ ನೀಡಿದೆ. 

ಕೆಪಿಸಿಸಿ ಸಂವಹನ ಮತ್ತು ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ, ಹಿರಿಯ ಪತ್ರಕರ್ತ ಕೆ.ಶಿವಕುಮಾರ್ ಮತ್ತು ದಲಿತ ಮುಖಂಡ ಎಫ್.ಎಚ್.ಜಕ್ಕಪ್ಪನವರ್‌ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ.

ಕರ್ನಾಟಕದ ಮಾಜಿ ಗ್ರಾಮೀಣಾಭಿವೃದ್ಧಿ ಸಚಿವರೂ ಆಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಬೇಗಾನೆ ರಾಮಯ್ಯ ಅವರ ಪುತ್ರಿಯಾಗಿರುವ ಡಾ.ಆರತಿ ಅವರು ಕಾಂಗ್ರೆಸ್ ಪಕ್ಷದೊಂದಿಗೆ ದೀರ್ಘಕಾಲದ ಸಂಬಂಧ ಹೊಂದಿದ್ದಾರೆ. ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಎನ್‌ಆರ್‌ಐ ಸೆಲ್‌ನ ಮೊದಲ ಅಧ್ಯಕ್ಷರಾಗಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments