Thursday, June 18, 2026
Homeಇತರೆಬೇಲೂರು: ಮಿತಿ ಮೀರಿದ ಬೀದಿ ನಾಯಿಗಳ ಹಾವಳಿ : ಕಣ್ಮುಚ್ಚಿ ಕುಳಿತ ಗ್ರಾ.ಪಂ. ಅಧಿಕಾರಿಗಳು.

ಬೇಲೂರು: ಮಿತಿ ಮೀರಿದ ಬೀದಿ ನಾಯಿಗಳ ಹಾವಳಿ : ಕಣ್ಮುಚ್ಚಿ ಕುಳಿತ ಗ್ರಾ.ಪಂ. ಅಧಿಕಾರಿಗಳು.

ಹಾಸನ: ಜಿಲ್ಲೆಯಾದ್ಯಂತ ಇತ್ತೀಚಿನ ದಿನಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ರಸ್ತೆಗಳಲ್ಲಿ ಓಡಾಡಲು ಜನರು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಮಕ್ಕಳು ಹಾಗೂ ವೃದ್ಧರ ಮೇಲೆ ನಾಯಿಗಳು ಏಕಾಏಕಿ ದಾಳಿ ಮಾಡುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ.

ಹೌದು..! ಬೇಲೂರು ತಾಲೂಕಿನ ಬಿಕ್ಕೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನ ರಸ್ತೆಯಲ್ಲಿ ಓಡಾಡುವುದೇ ಕಷ್ಟವಾಗಿದೆ, ಈ ಗ್ರಾಮ ಪಂಚಾಯಿತಿಯ ಎಲ್ಲಾ ವಾರ್ಡ್‌‌ಗಳಲ್ಲಿಯೂ ಒಂದೊಂದು ಗುಂಪು ಹೆಚ್ಚಾಗಿದ್ದು, ಜನ ಓಡಾಡುವಾಗ ಮತ್ತು ವಾಹನ ಚಲಾಯಿಸುವ ವೇಳೆ ಹಿಂಬಾಲಿಸಿಕೊಂಡು ಬೊಗಳುತ್ತವೆ.

ವಿದ್ಯಾರ್ಥಿಗಳು ಶಾಲಾ–ಕಾಲೇಜಿಗೆ, ವಯೋವೃದ್ಧರು ವಾಯು ವಿಹಾರಕ್ಕೆ ತೆರಳುವ ವೇಳೆ ನಾಯಿಗಳು ದಾಳಿ ನಡೆಸುತ್ತವೆ. ಈಗಾಗಲೇ ಐದಾರು ಮಂದಿ ನಾಯಿಗಳಿಂದ ಕಚ್ಚಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments