Tuesday, August 11, 2026
Homeಇತರೆಬೆಂಗಳೂರು; ಯೂಟ್ಯೂಬರ್ ಸಮೀರ್.ಎಂ.ಡಿ ಮನೆಗೆ ಬೆಳ್ತಂಗಡಿ ಪೊಲೀಸರ ದಾಳಿ

ಬೆಂಗಳೂರು; ಯೂಟ್ಯೂಬರ್ ಸಮೀರ್.ಎಂ.ಡಿ ಮನೆಗೆ ಬೆಳ್ತಂಗಡಿ ಪೊಲೀಸರ ದಾಳಿ

Telegram Group
Join Now

ಬೆಂಗಳೂರು; ಯೂಟ್ಯೂಬರ್ ಸಮೀರ್.ಎಂ.ಡಿ ಮನೆಗೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದಾರೆ. ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ನೇತೃತ್ವದ ತಂಡ ಹಾಗೂ ಎಫ್.ಎಸ್.ಎಲ್ ವಿಭಾಗದ ಸೋಕೊ ಸಿಬ್ಬಂದಿ ಸೆ.4 ರಂದು ಮಧ್ಯಾಹ್ನ 1-35 ರ ವೇಳೆಗೆ ದಾಳಿ ನಡೆಸಿದ್ದಾರೆ.

ಎI ವಿಡಿಯೋ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸಮೀರ್.ಎಂ.ಡಿ ವಿರುದ್ಧ ದಾಖಲಾದ ದೂರಿಗೆ ಸಂಬಂಧಿಸಿದಂತೆ ಪೊಲೀಸರಿಗೆ ಸಮೀರ್ ತನಿಖೆಗೆ ಸರಿಯಾಗಿ ಸಹಕರಿಸದ ಹಿನ್ನಲೆಯಲ್ಲಿ ದಾಳಿ ನಡೆದಿದೆ.  

ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಹುಳ್ಳಹಲ್ಲಿಯಲ್ಲಿರುವ ಸಮೀರ್ ಬಾಡಿಗೆ ಮನೆಗೆ ಬೆಳ್ತಂಗಡಿ ನ್ಯಾಯಾಲಯದಿಂದ ಸೆ.3 ರಂದು ಸರ್ಚ್ ವಾರಂಟ್ ಪಡೆದು ದಾಳಿ ನಡೆಸಿದ್ದಾರೆ. ಈ ವೇಳೆ ಸಮೀರ್ ವಿಡಿಯೋ ಮಾಡಲು ಬಳಸಿದ ಕಂಪ್ಯೂಟರ್ ಮತ್ತು ಮೊಬೈಲ್ ಫೋನ್ ನನ್ನು ಜಪ್ತಿ ಮಾಡಿದ್ದು,  ತನಿಖೆ ನಡೆಸಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments