Wednesday, February 11, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು: ಮತಗಳ್ಳತನದ ವಿರುದ್ಧ ಕಾಂಗ್ರೆಸ್ ಜನಜಾಗೃತಿ ಹೋರಾಟ: ಶ್ರೀಜಿತ್ ದಂಡಿನಮಕ್ಕಿ ನೇತೃತ್ವದಲ್ಲಿ ಸಹಿ ಸಂಗ್ರಹ

ಚಿಕ್ಕಮಗಳೂರು: ಮತಗಳ್ಳತನದ ವಿರುದ್ಧ ಕಾಂಗ್ರೆಸ್ ಜನಜಾಗೃತಿ ಹೋರಾಟ: ಶ್ರೀಜಿತ್ ದಂಡಿನಮಕ್ಕಿ ನೇತೃತ್ವದಲ್ಲಿ ಸಹಿ ಸಂಗ್ರಹ

ಚಿಕ್ಕಮಗಳೂರು: ಮತಗಳ್ಳತನದ ವಿರುದ್ಧ ರಾಹುಲ್ ಗಾಂಧಿಯವರು ನಡೆಸುತ್ತಿರುವ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಚಿಕ್ಕಮಗಳೂರು ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಗುರುವಾರ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಸಹಿ ಸಂಗ್ರಹ ಅಭಿಯಾನವನ್ನು ಜಿಲ್ಲಾಧ್ಯಕ್ಷರಾದ ಶ್ರೀಜಿತ್ ದಂಡಿನಮಕ್ಕಿ ಅವರ ನೇತೃತ್ವದಲ್ಲಿ ನಡೆಸಲಾಯಿತು.‌

ಸಹಿ ಸಂಗ್ರಹ ಅಭಿಯಾನದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ರವರು ಸಹಿ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ವಿನಯ್ ಕುಮಾರ್ ಸೊರಕೆ ಅವರು ರಾಹುಲ್ ಗಾಂಧಿಯವರು ದೇಶದ ಜನರಿಗೆ ಮತಗಳ್ಳತನವನ್ನು ದಾಖಲೆ ಸಮೇತ ತಿಳಿಸಿದ್ದಾರೆ.

ಇತ್ತೀಚಿಗೆ ಕರ್ನಾಟಕದ ಮಹಾದೇವಪುರದಲ್ಲಿ ನಡೆದ ಮತ ಅಕ್ರಮವನ್ನು ಜನರಿಗೆ ತಿಳಿಸುವ ಸಲುವಾಗಿ ಬೆಂಗಳೂರಿನಲ್ಲಿ ದೊಡ್ಡ ಸಮಾವೇಶವನ್ನು ಮಾಡಿದ್ದು, ಈಗ ಬಿಹಾರದ ಜನರಿಗೆ ಮತಯಾತ್ರೆಯನ್ನು ಮಾಡುವುದರ ಮೂಲಕ ಜನರನ್ನು ಜಾಗೃತಗೊಳಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾಹುಲ್ ಗಾಂಧಿಯವರಿಗೆ ಯುವ ಕಾಂಗ್ರೆಸ್ ನೈತಿಕ ಬೆಂಬಲ ನೀಡುತ್ತಿರುವುದು, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಲು ಚಿಕ್ಕಮಗಳೂರು ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನಡೆಸುತ್ತಿರುವ ಸಹಿ ಸಂಗ್ರಹ ಅಭಿಯಾನ ನಿಜಕ್ಕೂ ಮಾದರಿ ನಡೆಯಾಗಿದೆ ಇದರ ಮುಂದಾಳತ್ವವನ್ನು ತೆಗೆದುಕೊಂಡ ಚಿಕ್ಕಮಗಳೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಜಿತ್ ಗೌಡ ದಂಡಿನಮಕ್ಕಿ ಅವರಿಗೆ ಹಾಗೂ ಎಲ್ಲಾ ಯುವ ಕಾಂಗ್ರೆಸ್‌ನ ಪದಾಧಿಕಾರಿಗಳಿಗೆ ನಾನು ಧನ್ಯವಾದಗಳು ತಿಳಿಸುತ್ತೇನೆ ಎಂದರು.

ಈ ಅಭಿಯಾನ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಜಿತ್ ಗೌಡ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಆದಿಲ್ ಸಿಎನ್, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲಾಕೇಶ್, ಚಿಕ್ಕಮಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಭಿನಲ್ಲೂರು, ಶೃಂಗೇರಿ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷರಾದ ದುರ್ಗಾಚರಣ್, ಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ರತನ್ ಗೌಡ ಅರಗಿ, ಕೊಪ್ಪ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಜಯಾನಂದ ಹಾಗೂ ಜಿಲ್ಲಾ ಮತ್ತು ಬ್ಲಾಕ್ ಯುವ ಕಾಂಗ್ರೆಸ್ ನ ಪದಾಧಿಕಾರಿಗಳು ಹಾಜರಿದ್ದರು.

ವರದಿ: ಶಶಿ ಬೆತ್ತದಕೊಳಲು

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!