Wednesday, February 11, 2026
Homeಜಿಲ್ಲಾಸುದ್ದಿಕಳಸ: ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್‌ ಪ್ರೇಮಿಯಿಂದ ಯುವತಿಗೆ ಚಾಕು ಇರಿತ!

ಕಳಸ: ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್‌ ಪ್ರೇಮಿಯಿಂದ ಯುವತಿಗೆ ಚಾಕು ಇರಿತ!

ಚಿಕ್ಕಮಗಳೂರು: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಸಿಟ್ಟಿಗೆದ್ದ ಯುವಕನೋರ್ವ ಯುವತಿ ಮೇಲೆ ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಕಳಸ ಪಟ್ಟಣದ ಮಹಾವೀರ ಸರ್ಕಲ್ ಬಳಿ ಶುಕ್ರವಾರ ನಡೆದಿದೆ.

ಕೊಪ್ಪ ತಾಲೂಕಿನ ಗುಡ್ಡತೋಟ ಮೂಲದ ಕಾವ್ಯ (24) ಪ್ರಿಯಕರನಿಂದ ಚಾಕು ಇರಿತಕ್ಕೊಳಗಾದ ಯುವತಿಯಾಗಿದ್ದಾಳೆ. ಜಯಪುರದ ಸಮೀಪ ಚೌಡಿಕಟ್ಟೆ ಮೂಲದ ಯುವಕ ಮೋಹನ್ (25) ಆರೋಪಿಯಾಗಿದ್ದಾನೆ.

ಘಟನೆ ವಿವರ: ಕಾವ್ಯ ಕಳಸದ ಖಾಸಗಿ ಕ್ಲಿನಿಕ್‌ನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದು ಆಕೆಯನ್ನು ಯುವಕನೋರ್ವ ಪ್ರೀತಿಸುತ್ತಿದ್ದ ಎನ್ನಲಾಗಿದೆ ಆದರೆ ಆತನ ಪ್ರೀತಿಯನ್ನು ಯುವತಿ ನಿರಾಕರಿಸಿದ್ದಾಳೆ

ಇದರಿಂದ ಕೋಪಗೊಂಡ ಯುವಕ ಪಟ್ಟಣದ ಮಹಾವೀರಸರ್ಕಲ್ ಬಳಿ ಕಲ್ಲಿನಿಂದ ಹಲ್ಲೆ ಮಾಡಿ ತಲೆ ಹಾಗೂ ಬೆನ್ನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ, ಗಂಭೀರ ಗಾಯಗೊಂಡ ಯುವತಿಯನ್ನು ಕಳಸದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಕೊಡಿಸಲಾಗುತ್ತಿದೆ.

ಘಟನೆ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು ಸಕತ್‌ ಕ್ಲಾಸ್‌ ತೆಗೆದುಕೊಳ್ಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!