ಮೂಡಿಗೆರೆ: ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ರಸ್ತೆಯ ಮಧ್ಯ ಭಾಗದಲ್ಲಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು ಪ್ರವಾಸಿಗರಲ್ಲಿ ಕುತೂಹಲ ಮತ್ತು ಆತಂಕ ಸೃಷ್ಟಿ ಮಾಡಿತ್ತು.
ಪ್ರವಾಸಿಗರು ನಿಲ್ಲಿಸಿ ದೂರದಿಂದಲೇ ಕಾಡಾನೆ ಚಲನವಲನವನ್ನು ನೋಡಿದರು.ಕೆಲವರು ಮೊಬೈಲ್ ನಲ್ಲಿ ದೃಶ್ಯವನ್ನು ಸೆರೆಹಿಡಿದರು.
ಪದೇ ಪದೇ ಚಾರ್ಮಾಡಿ ಘಾಟ್‌ನಲ್ಲಿ ಕಾಣಿಸಿಕೊಂಡು ಆತಂಕ ಸೃಷ್ಟಿಸುತ್ತಿರೋ ಕಾಡಾನೆ ಭೈರ ಕೆಲವರು ಆತಂಕಗೊಂಡರು.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪವಿರುವ ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 173ಯಲ್ಲಿ ಘಾಟಿಯಲ್ಲಿ ಕಾಡಾನೆ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದು, ವಾಹನ ಸವಾರರು ಆತಂಕದಿಂದ ಸಂಚರಿಸುವಂತಾಗಿದೆ. ಅನಾಹುತ ಸಂಭವಿಸುವ ಮೊದಲು ಕ್ರಮ ಕೈಗೊಳ್ಳಬೇಕು’ ಎಂದು ಸ್ಥಳದಲ್ಲಿದ್ದ ವಾಹನ ಸವಾರರು ಒತ್ತಾಯಿಸಿದರು.
