Saturday, August 8, 2026
Homeಬ್ರೇಕಿಂಗ್ ನ್ಯೂಸ್ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ : ಸಿ.ಟಿ ರವಿ ವಿರುದ್ಧ ಕೇಸ್ ದಾಖಲು

ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ : ಸಿ.ಟಿ ರವಿ ವಿರುದ್ಧ ಕೇಸ್ ದಾಖಲು

Telegram Group
Join Now

ಮದ್ದೂರಿನ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ ರವಿ ವಿರುದ್ಧ ಸ್ವಯಂಪ್ರೇರಿತ ಕೇಸ್ ದಾಖಲಾಗಿದೆ.

ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟದ ಬಳಿಕ ಬುಧವಾರ (ಸೆ.10) ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವೇದಿಕೆಯಲ್ಲಿ ಸಿ.ಟಿ.ರವಿ ಭಾಷಣ ಮಾಡಿದ್ದರು. ಭಾಷಣದ ವೇಳೆ ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಮದ್ದೂರು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ ಮಂಜುನಾಥ್ ಅವರ ದೂರಿನನ್ವಯ ಪ್ರಕರಣ ದಾಖಲಾಗಿದೆ.

ಅನ್ಯ ಸಮುದಾಯಗಳ ಮಧ್ಯೆ ದ್ವೇಷ ಉಂಟುಮಾಡುವ ಮತ್ತು ಸೌಹಾರ್ದತಾ ಭಾವನೆಗಳಿಗೆ ಭಾದಕವಾಗುವಂತೆ, ವೈರತ್ವ, ದ್ವೇಷ ಉಂಟಾಗುವಂತೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಅಡಿ ಪ್ರಕರಣ ದಾಖಲಾಗಿದೆ.

ಸಿಟಿ ರವಿ ಹೇಳಿದ್ದೇನು?
ಅವರು 5% ಇದ್ದಾಗಲೇ ಬಾಲ ಬಿಚ್ಚುತ್ತಿದ್ದಾರೆ. ಇನ್ನೂ 50% ಆದಲ್ಲಿ ನಮ್ಮ ಮಕ್ಕಳು, ಮೊಮ್ಮಕ್ಕಳು ಬದುಕುವುದಕ್ಕೆ ಆಗುತ್ತಾ? ಸಮಾಜ ಒಡೆಯುತ್ತಾರೆ. ಕೆಲವು ಕುತಂತ್ರಿಗಳು ವೋಟಿನ ಆಸೆಗಾಗಿ ಹಿಂದೂ ಸಮಾಜವನ್ನು ಒಡೆಯುತ್ತಾರೆ. ಮುಸಲ್ಮಾನರು ಪಾಕಿಸ್ತಾನ ಜಿಂದಾಬಾದ್, ಬಾಂಬ್ ಹಾಕಿದರೂ ಕೂಡ ಎಸ್‌ಎಸ್ ಅಂತಾರೆ. ಮುಸಲ್ಮಾನರು ರಾಮಮಂದಿರದಲ್ಲಿ ಪೆಟ್ರೋಲ್ ಬಾಂಬ್ ಹಾಕಿದ್ದಾಗಲೇ ಇವರಿಗೆ ಬುದ್ಧಿ ಕಲಿಸಬೇಕಾಗಿತ್ತು. ಈಗ ಈ ರೀತಿ ಆಗುತ್ತಿರಲಿಲ್ಲ.

ನೀವು ಹೊರಗಡೆಯಿಂದ ಬಂದವರು, ನಾವು ಇಲ್ಲೇ ಇರುವವರು, ತೊಡೆ ತಟ್ಟೋಕೆಲಸ ಮಾಡಬೇಡಿ. ತೊಡೆ ಮುರಿತೀವಿ. ತಲೆನೂ ತೆಗಿತೀವಿ, ನಮಗೆ ತೊಡೆ ಮುರಿಯೋದು ಗೊತ್ತು. ಕಲ್ಲು ಹೊಡೆಯುವವರನ್ನು ಕಲ್ಲಿನ ಒಳಗಡೆ ಸಮಾಧಿ ಮಾಡೋ ತಾಕತ್ತು ಹಿಂದೂ ಸಮಾಜಕ್ಕಿದೆ ಎಂದು ಹೇಳಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments