Tuesday, February 10, 2026
Homeಜಿಲ್ಲಾಸುದ್ದಿಮೂಡಿಗೆರೆ : ಕಾಂಗ್ರೆಸ್ ಕಾರ್ಯಕರ್ತರಿಂದ ಸ್ವಚ್ಛತಾ ಕಾರ್ಯಕ್ರಮ ಆಯೋಜನೆ

ಮೂಡಿಗೆರೆ : ಕಾಂಗ್ರೆಸ್ ಕಾರ್ಯಕರ್ತರಿಂದ ಸ್ವಚ್ಛತಾ ಕಾರ್ಯಕ್ರಮ ಆಯೋಜನೆ

ಮೂಡಿಗೆರೆ: ಭಾರತೀಯ ಕಾಂಗ್ರೆಸ್ ಪಕ್ಷ ಮತ್ತು ಯೂತ್ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ಕಾರ್ಯಕರ್ತರಿಂದ ಕುದುರೆಮುಖ ಚಾರಣ ಕೈಗೊಂಡು ಸ್ವಚ್ಛತೆ ಕಾರ್ಯಕ್ರಮ ನೆರವೇರಿಸಿದರು.

ಈ ಸಂದರ್ಭದಲ್ಲಿ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಮಾತನಾಡಿ, ನಮ್ಮ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛವಾಗಿಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಪರಿಸರ ಉಳಿಸಿ ಬೆಳಸುವ ನಿಟ್ಟಿನಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲಾಗಿದೆ.

ಮುಂದಿನ ಪೀಳಿಗೆಗೆ ಶುದ್ಧ ಪರಿಸರದ ಅವಶ್ಯಕತೆ ತುಂಬಾ ಇದೆ ಪ್ಲಾಸ್ಟಿಕ್ ಪರಿಸರಕ್ಕೆ ಮಾರಕವಾಗಿದೆ. ಪ್ಲಾಸ್ಟಿಕ್ ಬಳಸದಂತೆ ಸಾರ್ವಜನಿಕರಿಗೆ ತಿಳಿ ಹೇಳಿದರು. ಪರಿಸರದ ಬಗ್ಗೆ ಕಾಳಜಿ ವಹಿಸಿ ಶ್ರಮದಾನ ಹಾಗೂ ಶಿಬಿರಗಳ ಮೂಲಕ ಸಾರ್ವಜನಿಕರು ತೊಡಗಿಸಿಕೊಳ್ಳಬೇಕು ಎಂದರು.

ಹಾಗೆ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛಗೊಳಿಸುವುದರಿಂದ ಸಾಂಕ್ರಾಮಿಕ ರೋಗಗಳು ಹರಾಡುವುದನ್ನು ತಡೆಗಟ್ಟಬಹುದಾಗಿದೆ ಸ್ವಇಚ್ಛೆ ಯಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಎನ್‌ಜಿಒಗಳು, ಮತ್ತು ಸಂಘ ಸಂಸ್ಥೆಗಳು ಇಂತಹ ಶಿಬಿರಗಳಲ್ಲಿ ಹೆಚ್ಚಿನದಾಗಿ ತೊಡಗಿಸಿಕೊಳ್ಳುವಂತೆ ತಿಳಿಸಿದರು..

ಪ್ರತಿ ದಿನ ಮನೆಗೆ ಬರುವ ಕಸದ ವಾಹನಗಳಿಗೆ ಹಸಿ ಕಸ ಮತ್ತು ಒಣ ಕಸ ವಿಂಗಡಿಸಿ ಕಸವನ್ನು ನೀಡಬೇಕು ಎಂದರು.

ಈ ಕಾರ್ಯಕ್ರಮ ದಲ್ಲಿ ಹಿರಿಯ ಮುಖಂಡರಾದ ಅಶ್ವಥ್ ಮಾಕೋನಹಳ್ಳಿ. ಯುವ ಕಾಂಗ್ರೇಸ್ ನ ದೀಕ್ಷಿತ್ ಕಣಚೂರು,ಆರ್ಯ ಪಟೇಲ್. ದೀಪಕ್ ಕಡಿದಾಳ್.ಆಶ್ರಿತ್ ಗೌಡ.ದೀಕ್ಷಿತ್ ಹಾಲೂರು.
ಸೇರಿದಂತೆ ಭಾರತೀಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು. ಹಾಗೂ ಯುವ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರು ಸೇರಿದಂತೆ ಸ್ಥಳೀಯರು ಇದ್ದರು

ವರದಿ : ಪುನೀತ್ ಕಡಿದಾಳ್ 

9483811948

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!