ಹಾಸನ : ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ನಟನೆಯ ಬಹು ನಿರೀಕ್ಷಿತ ಚಿತ್ರ ಕಾಂತಾರ ೦೧ ಚಿತ್ರೀಕರಣ ಬಿರುಸಿನಿಂದ ನಡೆಯುತ್ತಿದೆ. ಸದ್ಯ ಹಾಸನ ಜಿಲ್ಲೆಯ ಹೇರೂರು ಅರಣ್ಯ ಪ್ರದೇಶದಲ್ಲಿ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಈ ವೇಳೆ ಚಿತ್ರತಂಡದ ವಿರುದ್ಧ ಸ್ಥಳೀಯರು ಸಿಡಿದೆದ್ದಿದ್ದರು.
ಅರಣ್ಯ ಪ್ರದೇಶದಲ್ಲಿ ಮರಗಳನ್ನು ಕಡಿಯಲಾಗಿದೆ. ಕಾಡಿನೊಳಗೆ ಬ್ಲಾಸ್ಟ್ ಮಾಡಿ ತೊಂದರೆ ಕೊಡಲಾಗುತ್ತಿದೆ. ಸ್ಥಳೀಯ ನಿವಾಸಿಗಳು ಹಾಗೂ ವನ್ಯಜೀವಿಗಳಿಗೆ ಇದರಿಂದ ಸಮಸ್ಯೆಯಾಗುತ್ತಿದೆ ಅಂತ ಆರೋಪಿಸಿದ್ದರು. ಅರಣ್ಯ ನಿಯಮ ಉಲ್ಲಂಘನೆ ಮಾಡುತ್ತಿರುವ ಚಿತ್ರತಂಡದ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಇದೀಗ ಆ ಸಂಬಂಧಿತವಾಗಿ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿ ವರದಿ ನೀಡಿದ್ದಾರೆ. ಮರಗಳನ್ನು ಕಡಿಯಲಾಗಿದೆ. ಬ್ಲಾಸ್ಟ್ ಮಾಡಲಾಗಿದೆ
ಚಿತ್ರತಂಡ ನಿಯಮ ಉಲ್ಲಂಘನೆ ಮಾಡಿಲ್ಲ. ಅರಣ್ಯದಲ್ಲಿ ಯಾವುದೇ ಸ್ಪೋಟ ಮಾಡಿಲ್ಲ. ಕೃತಕ ಮರಗಳನ್ನು ಬಳಸಿ ಶೂಟಿಂಗ್ ಮಾಡಲಾಗುತ್ತಿದೆ ಅಂತ ವರದಿ ಕೊಟ್ಟಿದ್ದಾರೆ. ಇದರೊಂದಿಗೆ ಶೂಟಿಂಗ್ ಸಂದರ್ಭದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ತಂಡಕ್ಕೆ ಸೂಚನೆಯನ್ನೂ ಕೊಟ್ಟಿದ್ದಾರೆ. ಈ ವರದಿಯಿಂದ ಕಾಂತಾರ ಶೂಟಿಂಗ್ ಟೀಂಗೆ ರಿಲೀಫ್ ಸಿಕ್ಕಂತಾಗಿದೆ. ಪ್ರಕರಣ ಸಂಬಂಧ ಪರಿಶೀಲಿಸಿ ವರದಿ ನೀಡುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದರು.
