ಉಡುಪಿ : ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಶಾರದಾ ವಸತಿ ಶಾಲೆಗೆ ಬಾಂಬ್ ಬೆದರಿಕೆ ಬಂದಿದೆ. ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ. ಬೆದರಿಕೆ ಸಂದೇಶ ಹಿನ್ನೆಲೆಯಲ್ಲಿ ನಗರಾದ್ಯಂತ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮೇಲ್ ಸಂದೇಶ ಗಮನಿಸಿದ ಶಾಲೆ ಸಿಬ್ಬಂದಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೆ ಸ್ಥಳಕ್ಕೆ ಧಾವಿಸಿದ ಶ್ವಾನ ದಳ, ಪೊಲೀಸರು ಶಾಲೆಯ ಆವರಣದಲ್ಲಿ ಶೋಧ ನಡೆಸಿದ್ದಾರೆ. ಬೆದರಿಕೆ ವಿಚಾರ ತಿಳಿಯುತ್ತಿದ್ದಂತೆ ಪೋಷಕರು ಶಾಲೆ ಬಳಿ ಆಗಮಿಸಿದ್ದಾರೆ. ಇಲ್ಲಿ ಜಿಲ್ಲೆ ಮಾತ್ರವಲ್ಲ ಹೊರ ರಾಜ್ಯದ ಹಲವು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.
ಪ್ರತಿಷ್ಠಿತ ವಸತಿ ಶಾಲೆಗೆ ಬಾಂಬ್ ಬೆದರಿಕೆ – ಕೃಷ್ಣ ನಗರಿ ಉಡುಪಿಯಲ್ಲಿ ಆತಂಕ..!
RELATED ARTICLES