Tuesday, February 10, 2026
Homebig breakingಮಹಾಕುಂಭ ಮೇಳದಲ್ಲಿ ಕಾಲ್ತುಳಿತ - ೫೦ಕ್ಕೂ ಅಧಿಕ ಭಕ್ತರ ಸ್ಥಿತಿ ಗಂಭೀರ - ಪ್ರಯಾಗ್‌ರಾಜ್‌ನಲ್ಲಿ ಸೇರಿರುವ...

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ – ೫೦ಕ್ಕೂ ಅಧಿಕ ಭಕ್ತರ ಸ್ಥಿತಿ ಗಂಭೀರ – ಪ್ರಯಾಗ್‌ರಾಜ್‌ನಲ್ಲಿ ಸೇರಿರುವ ಕೋಟ್ಯಂತರ ಭಕ್ತರು

ಪ್ರಯಾಗ್‌ರಾಜ್‌ : ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿದೆ. ನಸುಕಿನ ಜಾವ ಕಾಲ್ತುಳಿತ ಸಂಭವಿಸಿದ್ದು, ಹಲವು ಭಕ್ತರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.


ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆ ಮಹಾಕುಂಭ ಮೇಳಕ್ಕೆ ಹೆಚ್ಚಿನ ಭಕ್ತರು ಆಗಮಿಸಿದ್ದರು. ಉತ್ತರ ಭಾರದಲ್ಲಿ ಮೌನಿ ಅಮಾವಾಸ್ಯೆಯನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ. ನಿನ್ನೆ ಮಧ್ಯರಾತ್ರಿಯಿಂದಲೇ ತ್ರಿವೇಣಿ ಸಂಗಮ ಬಳಿ ಕೋಟ್ಯಂತರ ಭಕ್ತರು ಸೇರಿದ್ದರು. ಏಕಾಏಕಿ ಸಂಗಮಸ್ನಾನಕ್ಕೆ ಮುಂದಾದ ಹಿನ್ನೆಲೆಯಲ್ಲಿ ಕಾಲ್ತುಳಿತ ಸಂಭವಿಸಿದೆ ಎನ್ನಲಾಗಿದೆ. ಸದ್ಯಕ್ಕೆ ತ್ರಿವೇಣಿ ಸಂಗಮದಲ್ಲಿ ಸ್ನಾನ ನಿರ್ಬಂಧಿಸಲಾಗಿದೆ.


ಘಟನೆ ಬಗ್ಗೆ ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಅವರು ಪ್ರಯಾಗ್‌ರಾಜ್‌ನ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಶೀಘ್ರದಲ್ಲಿ ಪರಿಸ್ಥಿತಿ ಹತೋಟಿಗೆ ತರಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡಾ ಉತ್ತರ ಪ್ರದೇಶ ಸರ್ಕಾರದ ಜೊತೆ ಸಂಪರ್ಕದಲ್ಲಿದ್ದು, ಘಟನೆ ಸಂಬಂಧ ಮಾಹಿತಿ ಪಡೆಯುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!