ಬೆಂಗಳೂರು : ಮುಡಾ ಕುರಿತು ಇಡಿ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಡಿಯವರ ಪತ್ರಿಕಾ ಪ್ರಕಟಣೆಗೂ ನನಗೂ ಸಂಬಂಧವಿಲ್ಲ. ಬಿಜೆಪಿಯವರು ಈ ಪತ್ರಿಕಾ ಪ್ರಕಟಣೆಯನ್ನು ಅನಗತ್ಯವಾಗಿ ಇಡಿ ಮೂಲಕ ಬಿಡುಗಡೆ ಮಾಡಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣದ ಪ್ರತಿಪಕ್ಷಗಳ ಆರೋಪ ಹಾಗೂ ರಾಜ್ಯದ ತೆರಿಗೆ ಹಣದಲ್ಲಿ ನಾಳಿನ ಸಮಾರಂಭ ನಡೆಸುತ್ತಿರುವ ಬಗ್ಗೆ ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಣ ದುರುಪಯೋಗ ಆಗಿರುವ ಪ್ರಶ್ನೆಯೇ ಇಲ್ಲ ಎಂದರು.
ತಪ್ಪಿತಸ್ಥರ ವಿರುದ್ಧ ಕ್ರಮ : ವಿಜಯಪುರದಲ್ಲಿ ಕಾರ್ಮಿಕರ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ‍್ಳಲಾಗುವುದು ಎಂದರು.
ಮೈಕ್ರೋ ಫೈನಾನ್ಸ್ ದಂಧೆ- ಕಾನೂನು ರೀತ್ಯ ಕ್ರಮ : ಮೈಸೂರು ಚಾಮರಾಜನಗರ ಜಿಲ್ಲೆಗಳ ಗ್ರಾಮೀಣ ಭಾಗದಲ್ಲಿ ಮೈಕ್ರೋ ಫೈನಾನ್ಸ್ ದಂಧೆ ಹೆಚ್ಚಿದ್ದು, ಜನರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ, ಜನರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ದಂಧೆ ನಡೆಸುತ್ತಿರುವ ಸಂಸ್ಥೆಯ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮುಡಾ ಕುರಿತು ED ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ – ED ಮೂಲಕ ಬಿಜೆಪಿ ಪ್ರಕಟಣೆ ಬಿಡುಗಡೆ ಮಾಡಿದೆ : ಸಿಎಂ ಗಂಭೀರ ಆರೋಪ
RELATED ARTICLES
