ಮೈಸೂರು : ನಗರದ ಉದಯಗಿರಿಯಲ್ಲಿ ಎರಡು ದಿನದ ಹಿಂದೆ ನಡೆದ ಗಲಭೆ ಸಂಬಂಧ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶಾಂತಿನಗರದ ಸುಹೇಲ್(ಸೈಯದ್ ಸುಹೇಲ್), ರಹೀಲ್ ಪಾಷಾ, ಅಯಾನ್, ಸತ್ಯನಗರದ ನಿವಾಸಿ ಏಜಾಜ್, ಮೈಸೂರಿನ ಗೌಸಿಯಾನಗರದ ನಿವಾಸಿ ಸೈಯದ್ ಸಾದಿಕ್, ರಾಜೀವ್ ನಗರದ ಸಾದಿಕ್ ಪಾಷಾ ಅಲಿಯಾಸ್ ಸಾದಿಕ್, ಅರ್ಬಾಜ್ ಷರೀಫ್, ಶೋಹೆಬ್ ಪಾಷಾ ಬಂಧಿತ ಆರೋಪಿಗಳು. ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ನಗರದ ವಿವಿಧೆಡೆಯ ಸಿಸಿ ಕ್ಯಾಮರಾಗಳ ಫೂಟೇಜ್ ಸಂಗ್ರಹಿಸಿರುವ ಪೊಲೀಸರು, ಅದರ ಆಧಾರದಲ್ಲಿ ಮತ್ತು ಮೊಬೈಲ್ ಲೊಕೇಷನ್ ಆಧಾರದಲ್ಲಿ ಆರೋಪಿಗಳಿಗಾಗಿ ಹುಡುಕಾಡುತ್ತಿದ್ದಾರೆ. ಆದರೆ ಅನೇಕ ಮಂದಿ ತಮ್ಮ ಮೊಬೈಲ್ಗಳನ್ನ ಮನೆಯಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದಾರೆ. ಸದ್ಯ ಬಂಧಿತರಾಗಿರುವ ಆರೋಪಿಗಳು ನೀಡುವ ಮಾಹಿತಿ ಆಧರಿಸಿ ಹೆಚ್ಚಿನ ಮಂದಿಯ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ.
ಮೈಸೂರು ಉದಯಗಿರಿ ಗಲಭೆ ಪ್ರಕರಣ – ಎಂಟು ಆರೋಪಿಗಳನ್ನು ಬಂಧಿಸಿದ ಪೊಲೀಸರು..!
RELATED ARTICLES