ಚಿಕ್ಕಮಗಳೂರು : ಆಕಸ್ಮಿಕವಾಗಿ ಕಾಲು ಜಾರಿ ಮಹಿಳೆಯೊಬ್ಬರು 20 ಅಡಿ ಪಾಳು ಬಾವಿಗೆ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ತಡಗ ಗ್ರಾಮದಲ್ಲಿ ನಡೆದಿದೆ.
ನಿನ್ನೆ ಸಂಜೆ ನೀರಿಲ್ಲದ ಬಾವಿಗೆ ಬಿದ್ದಿದ್ದ ಮಹಿಳೆ ಮೇಲೆ ಬರಲು ಪ್ರಯತ್ನಿಸಿದರೂ ಆಗದೆ ಇಡೀ ರಾತ್ರಿ ಬಾವಿಯಲ್ಲಿಯೇ ಪರದಾಡಿದ್ದಾರೆ. ನಿರ್ಜನ ಪ್ರದೇಶವಾದ್ದರಿಂದ ಎಷ್ಟೇ ಕೂಗಿದರು ಯಾರಿಗೂ ಕೇಳಿಸಿಲ್ಲ. ಇಂದು ಬೆಳಿಗ್ಗೆ ಕಿರುಚುವ ಶಬ್ದ ಕೇಳಿ ಸ್ಥಳೀಯರು ಬಾವಿ ಬಳಿ ಹೋಗಿ ಗಮನಿಸಿದಾಗ ಮಹಿಳೆ ಬಿದ್ದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ತರೀಕೆರೆ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಾವಿಯಲ್ಲಿ ಪರದಾಡುತ್ತಿದ್ದ ಮಹಿಳೆಯನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಪಾಳು ಬಿದ್ದ ಬಾವಿಯನ್ನು ಮುಚ್ಚುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಕಾಲು ಜಾರಿ ಪಾಳು ಬಾವಿಗೆ ಬಿದ್ದ ಮಹಿಳೆ – ರಾತ್ರಿಯಿಡೀ ಬಾವಿಯಲ್ಲಿ ನರಳಿದ ಬಡಜೀವ..!
RELATED ARTICLES