ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಯಾಂಡಲ್‌ವುಡ್‌ನ ಹೆಸರಾಂತ ನಟ ಡಾ. ಶಿವರಾಜ್ ಕುಮಾರ್ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.
ಕ್ಯಾನ್ಸರ್ ಸಂಬಂಧ ಅಮೆರಿಕಗೆ ತೆರಳಿದ್ದ ಶಿವರಾಜ್‌ಕುಮಾರ್ ಒಂದು ತಿಂಗಳ ಚಿಕಿತ್ಸೆ ಬಳಿಕ ನಿನ್ನೆ ಬೆಂಗಳೂರಿಗೆ ವಾಪಸ್ಸಾಗಿದ್ದರು. ಈ ಹಿನ್ನೆಲೆಯಲ್ಲಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ. ಅವರ ಶಸ್ತ್ರ ಚಿಕಿತ್ಸೆಯ ಮರು ದಿನವೇ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದಾಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ತೊಂದರೆ ಇಲ್ಲ ಎಂದು ತಿಳಿಸಿದ್ದರು.
ಮುಂದಿನ ತಿಂಗಳಿನಿಂದ ಚಿತ್ರೀಕರಣಕ್ಕೆ ತೆರಳುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು. ಈ ಸಂದರ್ಭ ಸಚಿವ ಬೈರತಿ ಸುರೇಶ್, ಕಾನೂನು ಸಲಹೆಗಾರ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ಸಾಥ್ ನೀಡಿದರು
ನಟ ಶಿವರಾಜ್ ಕುಮಾರ್ ಮನೆಗೆ ಸಿಎಂ ಭೇಟಿ – ಹ್ಯಾಟ್ರಿಕ್ ಹೋರೋ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ
RELATED ARTICLES