ಬೆಂಗಳೂರು : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಬಾಂಗ್ಲಾದೇಶದ ಮೂಲದ ನಜ್ಮಾ ಎಂದು ಗುರುತಿಸಲಾಗಿದೆ. ಬೆಂಗಳೂರಿನ ರಾಮಮೂರ್ತಿ ನಗರದ ಅಪಾರ್ಟ್ಮೆಂಟ್ ಬಳಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ನಜ್ಮಾ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಭೀಕರವಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈಕೆ ಸುಮನ್ ಎಂಬಾತನನ್ನು ವಿವಾಹವಾಗಿದ್ದು, ಮೂವರು ಮಕ್ಕಳಿದ್ದಾರೆ
ನಜ್ಮಾ ರಾಮಮೂರ್ತಿ ನಗರದಲ್ಲಿ ಅಪಾರ್ಟ್ಮೆಂಟ್‌ನಲ್ಲಿ ಮನೆ ಕೆಲಸ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಘಟನೆ ಸ್ಥಳಕ್ಕೆ ರಾಮಮೂರ್ತಿನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
