Monday, August 4, 2025
!-- afp header code starts here -->
Homebig breakingಮೃತದೇಹದ ಮೇಲಿನ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ - ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್..!‌

ಮೃತದೇಹದ ಮೇಲಿನ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ – ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್..!‌

ನವದೆಹಲಿ : ಶವದ ಮೇಲಿನ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂದು ಕರ್ನಾಟಕ ಹೈಕೋರ್ಟ್​ ನೀಡಿದ್ದ ಆದೇಶವನ್ನು ಇದೀಗ ಸುಪ್ರೀಂಕೋರ್ಟ್ ಎತ್ತಿಹಿದಿದೆ. ಶವದ ಮೇಲಿನ ಲೈಂಗಿಕ ಕ್ರಿಯೆಯನ್ನು ಅತ್ಯಾಚಾರ ಎಂದು ಪರಿಗಣಿಸಲು ಸಾಧ್ಯವಿಲ್ಲ ಅಂತ ಸುಪ್ರೀಂಕೋರ್ಟ್ ಹೇಳಿದೆ. ಆ ಮೂಲಕ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ವಜಾಗೊಳಿಸಿದೆ.
ರಾಜ್ಯದಲ್ಲಿ ನಡೆಸಿದ್ದ ಪ್ರಕರಣವೊಂದರಲ್ಲಿ 21 ವರ್ಷದ ಯುವತಿಯನ್ನು ಕೊಲೆ ಮಾಡಿದ ಬಳಿಕ ಆರೋಪಿಗಳು ಶವದೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದರು. ಸಾಕಷ್ಟು ಸದ್ದು ಮಾಡಿದ್ದ ಪ್ರಕರಣದಲ್ಲಿ ಕೊಲೆ & ಅತ್ಯಾಚಾರ ಕೇಸ್ ಅನ್ನು ಪೊಲೀಸರು ದಾಖಲಿಸಿದ್ದರು. ಹೈಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ನಡೆದು, ಶವದ ಮೇಲಿನ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಅಂತ ಹೈಕೋರ್ಟ್ ತೀರ್ಪು ನೀಡಿತ್ತು.‌ ಹೈಕೋರ್ಟ್‌ನ ಈ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿತ್ತು.
ಈ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿ ಸುಧಾಂಶು ಧುಲಿಯಾ ಪೀಠ, ಈ ಸಂಬಂಧ ಕಾನೂನು ರೂಪಿಸಲು ಸಂಸತ್‌ಗೆ ಅವಕಾಶವಿದೆ. ಅಗತ್ಯವಿದ್ದರೆ ಕಾನೂನು ರೂಪಿಸಬಹುದು ಎಂದು ಅಭಿಪ್ರಾಯಪಟ್ಟಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!