Wednesday, August 12, 2026
Homeಕ್ರೈಮ್ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್‌ - ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಹೈಕೋರ್ಟ್..!‌

ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್‌ – ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಹೈಕೋರ್ಟ್..!‌

Telegram Group
Join Now

ಧಾರವಾಡ : ಪೋಕ್ಸೋ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಹೈಕೋರ್ಟ್ ಬಿಗ್ ರಿಲೀಫ್‌ ಕೊಟ್ಟಿದೆ. ನ್ಯಾ. ನಾಗಪ್ರಸನ್ನ ಅವರ ಧಾರವಾಡ ಹೈಕೋರ್ಟ್ ಪೀಠ ಆದೇಶ ನೀಡಿದ್ದು, ಪ್ರಕರಣ ರದ್ದು ಮಾಡಲು ನಿರಾಕರಿಸಿದೆ.
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದುಗೊಳಿಸುವಂತೆ ಯಡಿಯೂರಪ್ಪ ಕೋರಿದ್ದರು. ಇದರ ವಿಚಾರಣೆ ನಡೆಸಿದ್ದ ಹೈಕೋರ್ಟ್ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಪ್ರಕರಣ ರದ್ದು ಮಾಡದೆ, ಕೇವಲ ಜಾಮೀನು ನೀಡಿದೆ. ಹೀಗಾಗಿ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.

ಏನು ಪ್ರಕರಣ..?
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 2024ರ ಮಾರ್ಚ್ 3ರಂದು ಬಿಎಸ್​ವೈ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಸಂತ್ರಸ್ತೆಯ ದೂರಿನ ಆಧಾರದಲ್ಲಿ ಎಫ್‌ಐಆರ್ ಕೂಡಾ ದಾಖಲಾಗಿತ್ತು. ಪ್ರಕರಣದ ಗಂಭೀರತೆ ಪರಿಗಣಿಸಿ ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿತ್ತು. ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು. ಅದರಂತೆ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆ ನೀಡಿದ್ದರು.
ನಂತರದ ಬೆಳವಣಿಗೆಯಲ್ಲಿ ತಮ್ಮ ವಿರುದ್ಧದ ಪ್ರಕರಣ ರದ್ದು ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್‌ಗೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments