Tuesday, August 11, 2026
Homeಕ್ರೈಮ್ರಾಜಧಾನಿಯ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ದಾಳಿ - ೧೦ ಮಹಿಳೆಯರ ರಕ್ಷಣೆ - ೭...

ರಾಜಧಾನಿಯ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ದಾಳಿ – ೧೦ ಮಹಿಳೆಯರ ರಕ್ಷಣೆ – ೭ ಮಂದಿ ಬಂಧನ..!

Telegram Group
Join Now

ಬೆಂಗಳೂರು : ರಾಜಧಾನಿಯಲ್ಲಿ ನಡೆಯುತ್ತಿದ್ದ ದೊಡ್ಡ ವೇಶ್ಯಾವಾಟಿಕೆ ದಂಧೆಯನ್ನು ಕೇಂದ್ರ ಅಪರಾಧ ವಿಭಾಗ ಪೊಲೀಸರು ಬಯಲಿಗೆಳೆದಿದ್ದಾರೆ. ಕೇಂದ್ರ ಅಪರಾಧ ವಿಭಾಗ, ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಪ್ರತ್ಯೇಕವಾಗಿ ನಗರದ 5 ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ದಾಳಿ ನಡೆಸಿದ್ದಾರೆ. 6 ಮಂದಿ ವಿದೇಶಿ ಮಹಿಳೆಯರು, ಹೊರರಾಜ್ಯದ ನಾಲ್ವರು ಮಹಿಳೆಯರು ಸೇರಿ ಒಟ್ಟು 10 ಮಂದಿ ಮಹಿಳೆಯರನ್ನು ರಕ್ಷಿಸಿದ್ದಾರೆ. ಜೊತೆಗೆ ಪ್ರಕರಣದಲ್ಲಿ ಭಾಗಿಯಾಗಿದ್ದ 7 ಆರೋಪಿಗಳನ್ನು ಬಂಧಿಸಿದ್ದಾರೆ.
ಕೆ.ಆ‌ರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರತಿಷ್ಠಿತ ಹೋಟೆಲ್‌ವೊಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ದೊರೆತ ಮಾಹಿತಿ ಮೇರೆಗೆ ಹೋಟೆಲ್ ಮೇಲೆ ದಾಳಿ ನಡೆಸಿ, ಓರ್ವ ವಿದೇಶಿ ಮಹಿಳೆ ಹಾಗೂ ನಾಲ್ವರು ಹೊರರಾಜ್ಯದ ಮಹಿಳೆಯನ್ನು ರಕ್ಷಿಸಿದ್ದಾರೆ. ಉದ್ಯೋಗದಾಸೆ ತೋರಿಸಿ ಮಹಿಳೆಯನ್ನು ಅಕ್ರಮ ಮಾನವ ಕಳ್ಳಸಾಗಣೆ ಮಾಡಿಕೊಂಡು ಹೋಟೆಲ್‌ನಲ್ಲಿ ಇರಿಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ಮೂವರು ಆರೋಪಿಗಳ ವಿರುದ್ಧ ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೊಂದೆಡೆ ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯ ರಾಚೇನಹಳ್ಳಿಯ ಅಪಾರ್ಟ್‌ಮೆಂಟ್‌ ಮೇಲೆ ದಾಳಿ ನಡೆಸಿ ವೇಶ್ಯಾವಾಟಿಕೆಯಲ್ಲಿ ಸಿಲುಕಿದ್ದ ಓರ್ವ ವಿದೇಶಿ ಮತ್ತು ಓರ್ವ ಹೊರರಾಜ್ಯದ ಮಹಿಳೆಯರನ್ನು ರಕ್ಷಿಸಿದ್ದಾರೆ. ಮೊಬೈಲ್‌ ಮೂಲಕ ಗಿರಾಕಿಗಳನ್ನು ಸಂಪರ್ಕಿಸಿ ಅಪಾರ್ಟ್‌ಮೆಂಟ್‌ಗೆ ಕರೆಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದರು.
ರಾಮಮೂರ್ತಿನಗರ ಮತ್ತು ಎಚ್‌ಎಎಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೇಶ್ಯಾ ವಾಟಿಕೆಯಲ್ಲಿ ತೊಡಗಿದ್ದ ಇಬ್ಬರು ವಿದೇಶಿ ಮಹಿಳೆಯರು ಹಾಗೂ 4 ವರ್ಷದ ಮಗುವನ್ನು ರಕ್ಷಿಸಲಾಗಿದೆ. ಹನುಮಂತನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀನಗರದ ಮನೆಯೊಂದರ ಮೇಲೆ ದಾಳಿ ನಡೆಸಿ ವೇಶ್ಯಾವಾಟಿಕೆಯಲ್ಲಿ ಸಿಲುಕಿದ್ದ ವಿದೇಶಿ ಮಹಿಳೆಯನ್ನು ರಕ್ಷಿಸಲಾಗಿದೆ. ಆರೋಪಿಗಳು ಹೆಚ್ಚಿನ ಹಣದ ಆಮಿಷವೊಡ್ಡಿ ವಿದೇಶಿ ಮಹಿಳೆಯನ್ನು ಮನೆಯಲ್ಲೇ ಇರಿಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ಹನುಮಂತನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments