ಬಳ್ಳಾರಿ : ನಾನು ಬಿಜೆಪಿಯಲ್ಲಿಯೇ ಇರುತ್ತೇನೆ. ಪಕ್ಷ ಬಿಟ್ಟು ಎಲ್ಲೂ ಹೋಗುವುದಿಲ್ಲ ಅಂತ ಮಾಜಿ ಸಚಿವ ಬಿ. ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ದೆಹಲಿಗೆ ಬರುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಸೂಚಿಸಿದ್ದಾರೆ. ತರಾತುರಿಯಲ್ಲಿ ಯಾವುದೇ ರಾಜಕೀಯ ನಿಲುವು ತೆಗೆದುಕೊಳ್ಳಬೇಡಿ. ದೆಹಲಿಗೆ ಬನ್ನಿ ಮಾತನಾಡೋಣ ಎಂದು ಹೇಳಿದ್ದಾರೆ ಎಂದರು.
ಕೋರ್ ಕಮಿಟಿಯಲ್ಲಾದ ಬೆಳವಣಿಗೆ ಕುರಿತು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರಿಗೂ ಮಾಹಿತಿ ನೀಡುತ್ತೇನೆ. ಸಂಡೂರು ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಸೋಲಿಗೆ ನೀವೇ ಕಾರಣ ಎಂದು ದೂರಿದ್ದ ಅಗರವಾಲ್ ಸಹ ತಮ್ಮ ಮಾತು ಹಿಂದಕ್ಕೆ ಪಡೆಯುವುದಾಗಿ ಹೇಳಿದ್ದಾರೆ. ದೆಹಲಿಗೆ ಹೋಗುವ ದಿನ ಖಚಿತವಾಗಿಲ್ಲ ಎಂದರು.
ಸುದೀರ್ಘ ರಾಜಕೀಯ ಜೀವನದಲ್ಲಿ ಸಾಧ್ಯವಾದಷ್ಟು ಬಿಜೆಪಿಗೆ ಅಳಿಲು ಸೇವೆ ಸಲ್ಲಿಸಿದ್ದೇನೆ ಹೊರತು ದ್ರೋಹ ಬಗೆದಿಲ್ಲ. ರಾಜಕಾರಣದಲ್ಲಿ ವಿಶ್ವಾಸ ಮುಖ್ಯ. ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದರಿಂದ ಮಾತನಾಡಿದ್ದೇನೆ. ಇನ್ನು ಏನಿದ್ದರೂ ಪಕ್ಷದ ವಿಚಾರವನ್ನು ನಾಲ್ಕು ಗೋಡೆಗಳ ಮಧ್ಯೆ ಮಾತಾಡುತ್ತೇನೆ ಎಂದು ಹೇಳಿದರು.
ರಾಮುಲು ಕಾಂಗ್ರೆಸ್‌ಗೆ ಬಂದರೆ ಸ್ವಾಗತ ಎಂದಿರುವ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಶ್ರೀರಾಮುಲು ಒಳ್ಳೆಯವನು ಎಂಬ ಕಾರಣಕ್ಕಾಗಿಯೇ ಅವರು ಕರೆದಿದ್ದಾರೆ. ನನ್ನ ಮೇಲಿನ ಗೌರವದಿಂದ ಕರೆದಿದ್ದಾರೆ. ಕಾಂಗ್ರೆಸ್ ನಾಯಕರು ಅಭಿಮಾನದಿಂದ ಮಾತನಾಡಿಸುತ್ತಾರೆ. ನನಗೆ ಗೌರವ ಕೊಟ್ಟು ಪಕ್ಷಕ್ಕೆ ಕರೆದಿರುವ ಕಾಂಗ್ರೆಸ್ ನಾಯಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.
ಶ್ರೀರಾಮುಲು ಒಳ್ಳೆಯವನು ಎಂಬ ಕಾರಣಕ್ಕಾಗಿ ಕಾಂಗ್ರೆಸ್‌ನವರು ಕರೆದಿದ್ದಾರೆ – ನಾನು ಬಿಜೆಪಿ ಬಿಟ್ಟು ಎಲ್ಲೂ ಹೋಗಲ್ಲ ಎಂದ ಶ್ರೀರಾಮುಲು..!
RELATED ARTICLES