Wednesday, February 11, 2026
Homebig breakingಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ, ಸಚಿವ ಭೈರತಿ ಸುರೇಶ್‌ ಅವರಿಗೆ ತಾತ್ಕಾಲಿಕ ರಿಲೀಫ್‌ ನೀಡಿದ ಹೈಕೋರ್ಟ್‌

ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ, ಸಚಿವ ಭೈರತಿ ಸುರೇಶ್‌ ಅವರಿಗೆ ತಾತ್ಕಾಲಿಕ ರಿಲೀಫ್‌ ನೀಡಿದ ಹೈಕೋರ್ಟ್‌

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಸಮನ್ಸ್‌ ರದ್ದು ಕೋರಿ ಅರ್ಜಿ ಸಲ್ಲಿಸಿದ್ದ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್​​ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ, ಇಡಿ ಸಮನ್ಸ್‌​ಗೆ​ ನೀಡಿದ್ದ ತಡೆಯಾಜ್ಞೆ ವಿಸ್ತರಣೆ ಮಾಡಿದೆ. ಮುಂದಿನ ವಿಚಾರಣೆಯನ್ನು ಫೆಬ್ರವರಿ 20ಕ್ಕೆ ಮುಂದೂಡಿದೆ. ಹೀಗಾಗಿ ಫೆ.20ರರವರೆಗೆ ಇಡಿ ಸಮನ್ಸ್‌ಗೆ ತಡೆಯಾಜ್ಞೆ ವಿಸ್ತರಣೆಯಾಗಿದೆ.
ಸಚಿವ ಭೈರತಿ ಸುರೇಶ್ ಪರ ವಾದ ಮಂಡಿಸಿದ ವಕೀಲ ಸಿ.ವಿ. ನಾಗೇಶ್, ಇಡಿ ತನಿಖಾಧಿಕಾರಿಗಳು ನಮೂನೆಯೊಂದನ್ನು ಕಳುಹಿಸಿದ್ದಾರೆ. ಇದರಲ್ಲಿ ಭೈರತಿ ಕುಟುಂಬದವರು, ಉದ್ಯೋಗಿಗಳು ಇತರರ ವಿವರ ಕೇಳಿದ್ದಾರೆ. ಇದು ಅವರ ಖಾಸಗಿತನದ ಸ್ಪಷ್ಟ ಉಲ್ಲಂಘನೆ. 14 ಸೈಟ್ ಹಂಚಿಕೆಗೂ ಭೈರತಿ ಸುರೇಶ್‌ಗೂ ಸಂಬಂಧವಿಲ್ಲ. ಮುಡಾದಲ್ಲಿ ಭೈರತಿ ಸುರೇಶ್ ಯಾವುದೇ ಹುದ್ದೆ ವಹಿಸಿಕೊಂಡಿಲ್ಲ. ಹೀಗಾಗಿ ಇಡಿ ಸಮನ್ಸ್ ಕಾನೂನುಬಾಹಿರ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!