Friday, March 27, 2026
Homebig breakingಹೃದಯಾಘಾತವಾಗಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಕೊನೆಯುಸಿರು - ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಘಟನೆ

ಹೃದಯಾಘಾತವಾಗಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಕೊನೆಯುಸಿರು – ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಘಟನೆ

ಮೈಸೂರು : ಬಾಲ್ಯಾವಸ್ಥೆಯಲ್ಲೇ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಲೇ ಇದೆ. ಕೆಲವು ದಿನಗಳ ಹಿಂದಷ್ಟೇ ಚಾಮರಾಜನಗರದಲ್ಲಿ ೩ನೇ ತರಗತಿ ಬಾಲಕಿಯೊಬ್ಬಳು ಹೃದಯಾಘಾತದಿಂದ ಕೊನೆಯುಸಿರೆಳೆದ್ದ ಸುದ್ದಿಯನ್ನ ಗಮನಿಸಿದ್ದೇನೆ. ಇದೀಗ ಅಂಥದ್ದೇ ಮತ್ತೊಂದು ಪ್ರಕರಣ ನಡೆದಿದೆ.
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಕೆಲ್ಲೂರು ಎಂಬಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ. ನಾಗರಾಜ್, ವಸಂತ ದಂಪತಿ ಪುತ್ರಿ ದೀಪಿಕಾ (15) ಮೃತಪಟ್ಟ ವಿದ್ಯಾರ್ಥಿನಿ. ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ದೀಪಿಕಾ ಇದ್ದಕ್ಕಿದ್ದಂತೆ ಅಸ್ವಸ್ಥಳಾಗಿದ್ದಾಳೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಸಾವು ಸಂಭವಿಸಿದೆ. ಹೃದಯಾಘತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!