Thursday, July 2, 2026
Homeಕ್ರೈಮ್ನಟ ಸೈಫ್‌ ಅಲಿ ಖಾನ್‌ ಮೇಲೆ ಮಾರಕಾಸ್ತ್ರದಿಂದ ದಾಳಿ - ಬೆಚ್ಚಿಬಿದ್ದ ಬಾಲಿವುಡ್..!‌

ನಟ ಸೈಫ್‌ ಅಲಿ ಖಾನ್‌ ಮೇಲೆ ಮಾರಕಾಸ್ತ್ರದಿಂದ ದಾಳಿ – ಬೆಚ್ಚಿಬಿದ್ದ ಬಾಲಿವುಡ್..!‌

Telegram Group
Join Now

ಮುಂಬೈ : ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಲಾಗಿದೆ. ಚಾಕುವಿನಿಂದ ಇರಿಯಲಾಗಿದ್ದು, ಸದ್ಯ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮುಂಬೈನ ಬಾಂದ್ರಾ ನಿವಾಸದಲ್ಲಿ ಇದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ಸೈಫ್ ಅಲಿ ಖಾನ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ನಸುಕಿನ ಜಾವ ಮೂರು ಗಂಟೆ ವೇಳೆಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ಶಸ್ತ್ರಚಿಕಿತ್ಸೆಯೂ ಆಗಿದೆ. ಈ ವೇಳೆ ದೇಹದಿಂದ ಕಬ್ಬಣದ ಚೂರೊಂದನ್ನು ಹೊರತೆಗೆದಿರುವುದಾಗಿ ತಿಳಿದುಬಂದಿದೆ.
ಕತ್ತು, ಬೆನ್ನು ಮತ್ತು ಹೊಟ್ಟೆಯ ಭಾಗಕ್ಕೆ ಇರಿಯಲಾಗಿದೆ. ಆಸ್ಪತ್ರೆ ಹಾಗೂ ಮನೆಗೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ಚುರುಕುಗೊಳಿಸಿದ್ದಾರೆ. ಮನೆಯಲ್ಲಿ ಕೆಲಸಕ್ಕಿದ್ದ ಸಿಬ್ಬಂದಿಯ ಮೇಲೆ ಅನುಮಾನ ವ್ಯಕ್ತವಾಗಿದ್ದು, ಶಂಕಿತ ನಾಲ್ವರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments