ಶಿವಮೊಗ್ಗ : ಜಿಲ್ಲೆಯಲ್ಲಿ ಕೆಲವು ದಿನಗಳಿಂದ ವಿರಾಮ ನೀಡಿದ್ದ ಮಳೆ ಮತ್ತೆ ಚುರುಕು ಪಡೆದುಕೊಂಡಿದೆ. ಸಾಗರ ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲಿ ವಿಶ್ವವಿಖ್ಯಾತ ಜೋಗ ಜಲಪಾತ ಕಣ್ಮನ ಸೆಳೆಯುತ್ತಿದೆ.
ಹಾಲ್ನೊರೆಯಂತೆ ದುಮ್ಮಿಕ್ಕುತ್ತಿರುವ ಜೋಗದ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ ಆಗ್ತಿದ್ದಾರೆ. ಜನರನ್ನ ಸೂಜಿಗಲ್ಲಿನಂತೆ ಸೆಳೆಯುತ್ತಿರುವ ಜಲಪಾತದ ವೀಕ್ಷಣೆಗೆ ಸ್ಥಳೀಯರು, ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ರಾಜ, ರಾಣಿ, ರೋರರ್ ರಾಕೆಟ್ ಮೂಲಕ ಧುಮ್ಮಿಕ್ಕುಕ್ಕು ಜೋಗ್ ಪಾಲ್ಸ್ ಕಂಡು ಮನಸೋಲುತ್ತಿದ್ದಾರೆ.



