ಬೆಳ್ತಂಗಡಿ : ಧರ್ಮಸ್ಥಳದ ಬುರುಡೆ ಪ್ರಕರಣ ಹಾಗೂ ಸೌಜನ್ಯ ಕೇಸಿನ ಹೋರಾಟದಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನ ಅವರನ್ನು ಗಡಿಪಾರು ಮಾಡಲಾಗಿದೆ. ಹೌದು.. ಸುಮಾರು 32 ಪ್ರಕರಣ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದು ಬೆಳ್ತಂಗಡಿ ಪೊಲೀಸರು ಪುತ್ತೂರು ಎಸಿ ಕೊನೆಗೂ ಗಡಿಪಾರು ಮಾಡಿ ಆದೇಶ ಮಾಡಿದ್ದಾರೆ.
ಪುತ್ತೂರು ಸಹಾಯಕ ಆಯುಕ್ತರಾದ(ಎಸಿ) ಸ್ಟೆಲ್ಲಾ ವರ್ಗಿಸ್ ಗೆ ಬೆಳ್ತಂಗಡಿ ಪೊಲೀಸರು ಪ್ರಕರಣದ ಬಗ್ಗೆ ವರದಿ ನೀಡಿದ್ದನ್ನು ಪರಿಶೀಲನೆ ನಡೆಸಿ ವರದಿಯ ಆಧಾರದಲ್ಲಿ ಸೆ.18 ರಂದು ರೌಡಿಶೀಟರ್ ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷಗಳ ಅವಧಿಗೆ ಮಾಡಿ ಆದೇಶ ಮಾಡಲಾಗಿದೆ.
ಗಡಿಪಾರು ಮಾಡಿದ ಆದೇಶ ಪ್ರತಿ ಬಂಟ್ವಾಳ ಉಪವಿಭಾಗ ಡಿವೈಎಸ್ಪಿಗೆ ಬಂದ ಬಳಿಕ ಗಡಿಪಾರು ಮಾಡುವ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.
