Sunday, July 26, 2026
Homeಬ್ರೇಕಿಂಗ್ ನ್ಯೂಸ್ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ರಾಜ್ಯದ ಜನತೆಗೆ ಮಹತ್ವದ ಕರೆಕೊಟ್ಟ ಸಿಎಂ ಡಿಕೆಶಿ!

ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ರಾಜ್ಯದ ಜನತೆಗೆ ಮಹತ್ವದ ಕರೆಕೊಟ್ಟ ಸಿಎಂ ಡಿಕೆಶಿ!

Telegram Group
Join Now

ಬೆಂಗಳೂರು: ನನ್ನ ಹೆಗಲ ಮೇಲಿರುವುದು ಕೇವಲ ಮುಖ್ಯಮಂತ್ರಿಯ ಜವಾಬ್ದಾರಿಯಲ್ಲ, ಬದಲಿಗೆ ಕೋಟ್ಯಂತರ ಕನ್ನಡಿಗರ ಕನಸುಗಳನ್ನು ನನಸು ಮಾಡುವ ಪವಿತ್ರ ಕರ್ತವ್ಯ ನನ್ನ ಬದುಕಿನ ಪ್ರತಿಯೊಂದು ಏಳುಬೀಳುಗಳಲ್ಲೂ ಧೈರ್ಯ ತುಂಬಿದ್ದೀರಿ ಎಂದು ನೂತನ ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಎಕ್ಸ್‌ ಪೋಸ್ಟ್‌ನಲ್ಲೇನಿದೆ?
ಜನರಿಂದ, ಜನರಿಗಾಗಿ, ಜನರಿಗೋಸ್ಕರ ನನ್ನ ಬದುಕಿನ ಪ್ರತಿಯೊಂದು ಏಳುಬೀಳುಗಳಲ್ಲೂ ಧೈರ್ಯ ತುಂಬಿ, ನನ್ನನ್ನು ಹೆಗಲ ಮೇಲೆ ಹೊತ್ತು ಮುನ್ನಡೆಸಿದ ನನ್ನ ಪ್ರೀತಿಯ ಕರ್ನಾಟಕದ ಕೋಟ್ಯಂತರ ಜನತೆ ಹಾಗೂ ಕಾರ್ಯಕರ್ತ ಬಂಧುಗಳ ಆಶೀರ್ವಾದದಿಂದ ಲೋಕಭವನದಲ್ಲಿ ಇಂದು ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದೆ. ಈ ಕ್ಷಣದಲ್ಲಿ ನಾನು ನಿಮ್ಮೆಲ್ಲರ ಪ್ರೀತಿ ಹಾಗೂ ವಿಶ್ವಾಸಕ್ಕೆ ತಲೆಬಾಗುತ್ತೇನೆ.

ಇಂದು ನನ್ನ ಹೆಗಲ ಮೇಲಿರುವುದು ಕೇವಲ ಮುಖ್ಯಮಂತ್ರಿಯ ಜವಾಬ್ದಾರಿಯಲ್ಲ, ಬದಲಿಗೆ ಕೋಟ್ಯಂತರ ಕನ್ನಡಿಗರ ಕನಸುಗಳನ್ನು ನನಸು ಮಾಡುವ ಪವಿತ್ರ ಕರ್ತವ್ಯ. ಈ ಅವಕಾಶವನ್ನು ನನಗೆ ಕರುಣಿಸಿದ ಹಿರಿಯರಿಗೆ, ಮಾರ್ಗದರ್ಶಕರಿಗೆ ಹಾಗೂ ನನ್ನ ಶಕ್ತಿಯಾಗಿ ನಿಂತ ಪ್ರತಿಯೊಬ್ಬರಿಗೂ ನನ್ನ ಹೃದಯಪೂರ್ವಕ ಕೃತಜ್ಞತೆಗಳು.

ವೇಗವಾಗಿ ಬದಲಾಗುತ್ತಿರುವ ಇಂದಿನ ತಂತ್ರಜ್ಞಾನದ ಯುಗದಲ್ಲಿ, ಹೊಸ ಆಲೋಚನೆಗಳೊಂದಿಗೆ ನಮ್ಮ ಹೆಮ್ಮೆಯ ಕರ್ನಾಟಕವನ್ನು ಅಭಿವೃದ್ಧಿಯ ಅತ್ಯುನ್ನತ ಶಿಖರಕ್ಕೆ ಕೊಂಡೊಯ್ಯಬೇಕಿದೆ. ಈ ಸರ್ವತೋಮುಖ ಪ್ರಗತಿಯ ದಾರಿಯಲ್ಲಿ ರೈತರು, ಶ್ರಮಿಕರು, ಮಹಿಳೆಯರು, ವಿದ್ಯಾರ್ಥಿಗಳು, ಯುವಜನರು ಹಾಗೂ ಪ್ರತಿಯೊಬ್ಬ ನಾಗರಿಕರ ಸಹಭಾಗಿತ್ವ ನಮಗೆ ಮುಖ್ಯ.

ಯಾವುದೇ ಒಬ್ಬ ವ್ಯಕ್ತಿಯಿಂದ ಬದಲಾವಣೆ ಸಾಧ್ಯವಿಲ್ಲ. ಆದರೆ, ನಾವೆಲ್ಲರೂ ಕೈಜೋಡಿಸಿದರೆ ಅಸಾಧ್ಯವಾದುದು ಯಾವುದೂ ಇಲ್ಲ. ಬನ್ನಿ, ನಮ್ಮ ಭವಿಷ್ಯದ ಪೀಳಿಗೆ ಹೆಮ್ಮೆ ಪಡುವಂತಹ ಸುಂದರ, ಸಮೃದ್ಧ ಮತ್ತು ಪ್ರಗತಿಪರ ಕರ್ನಾಟಕವನ್ನು ಕಟ್ಟೋಣ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಕರೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments