ಬಿಗ್‌ಬಾಸ್‌ಗೆ ಬೆಂಗಳೂರು ದಕ್ಷಿಣ ಜಿಲ್ಲಾಡಳಿತದಿಂದ ಬಿಗ್ ರಿಲೀಫ್ ಸಿಕ್ಕಿದೆ. ಬಿಗ್ ಬಾಸ್ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋಗೆ ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿಯವರು ಸಮಸ್ಯೆ ಇತ್ಯರ್ಥ್ಯಕ್ಕೆ 10 ದಿನಗಳ ತಾತ್ಕಾಲಿಕ ಕಾಲಾವಕಾಶ ನೀಡಿದ್ದಾರೆ.
ಜಾಲಿವುಡ್ ಸ್ಟುಡಿಯೋ ಪರ ವಕೀಲ ವಿಶ್ವಾಸ್ ಗೌಡ ಮಾತನಾಡಿ, ಇಂದು ನಮ್ಮ ಕಕ್ಷಿದಾರರು ಜಿಲ್ಲಾಧಿಕಾರಿಗಳು ಭೇಟಿ ಮಾಡಿ ಮಾತನಾಡಿದ್ದಾರೆ. ಈಗ ಡಿಸಿಯವರು 10 ದಿನ ಕಾಲಾವಕಾಶ ನೀಡಿದ್ದಾರೆ ಎಂದು ತಿಳಿಸಿದರು
ಅ.6 ರಂದು ನೋಟಿಸ್ ನೀಡಿ ಅ.7 ರಂದು ಬೀಗ ಹಾಕಿದ್ದನ್ನು ಪ್ರಶ್ನಿಸಿ ನಾವು ಹೈಕೋರ್ಟ್‌ಗೆ ರಿಟ್ ಅರ್ಜಿ ಹಾಕಿದ್ದೆವು. ಈಗ ಜಿಲ್ಲಾಡಳಿತ 10 ದಿನಗಳ ಕಾಲಾವಕಾಶ ನೀಡಿದ್ದರಿಂದ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹಿಂದಕ್ಕೆ ಪಡೆಯುತ್ತೇವೆ ಎಂದು ಹೇಳಿದರು
