Tuesday, August 11, 2026
Homeಬ್ರೇಕಿಂಗ್ ನ್ಯೂಸ್ಬೂಕರ್ ಪ್ರಶಸ್ತಿ ಪುರಸ್ಕೃತೆ ಕನ್ನಡದ ಲೇಖಕಿ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ!

ಬೂಕರ್ ಪ್ರಶಸ್ತಿ ಪುರಸ್ಕೃತೆ ಕನ್ನಡದ ಲೇಖಕಿ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ!

Telegram Group
Join Now

ವಿಶ್ವವಿಖ್ಯಾತ ಮೈಸೂರು ದಸರಾ ಆರಂಭಕ್ಕೆ ದಿನಗಣನೆಗಳು ಶುರುವಾಗಿವೆ. 2025ರ ದಸರಾ ಚಟುವಟಿಗಳ ಸಿದ್ದತೆ ಈಗಾಗಲೇ ಆರಂಭಗೊಂಡಿದ್ದು, ದಸರಾಗೆ ಸೆಪ್ಟೆಂಬರ್ 22ರಂದು ಚಾಲನೆ ಸಿಗಲಿದೆ. ಇನ್ನು ಈ ಬಾರಿ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ ಕನ್ನಡದ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ದಸರಾ ಮಹೋತ್ಸವ ಉದ್ಘಾಟನೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್ ಅವರು ಉದ್ಘಾಟಿಸಲಿದ್ದಾರೆ. ಅವರ ಹೃದಯ ದೀಪ ಕೃತಿಗೆ ಬೂಕರ್ ಪ್ರಶಸ್ತಿ ಸಿಕ್ಕಿದ್ದು, ಕರ್ನಾಟಕದ ಮಹಿಳೆಗೆ ಬೂಕರ್ ಪ್ರಶಸ್ತಿ ಸಿಕ್ಕಿದ್ದು ಬಹಳ ಸಂತೋಷ ಆಗಿದೆ. ಹೋರಾಟದ ಹಿನ್ನೆಲೆಯಿಂದ ಬಂದವರು ಬಾನು ಮುಷ್ತಾಕ್. ರೈತ ಮತ್ತು ಕನ್ನಡ ಚಳವಳಿಯಲ್ಲಿ ಕೆಲಸ ಮಾಡಿದ್ದಾರೆ. ಹೀಗಾಗಿ ಮಹಿಳೆಯನ್ನ ದಸರಾ ಮಹೋತ್ಸವ ಉದ್ಘಾಟನೆಗೆ ಆಹ್ವಾನ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು. 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments