Wednesday, February 11, 2026
Homebig breakingBREAKING: ನಟ ದರ್ಶನ್‌ʼಗೆ ಬಿಗ್‌ ಶಾಕ್:‌ ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್!

BREAKING: ನಟ ದರ್ಶನ್‌ʼಗೆ ಬಿಗ್‌ ಶಾಕ್:‌ ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಗಳಿಗೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದೆ.

ನಟ ದರ್ಶನ್​ಗೆ ಬಿಗ್ ಶಾಕ್ ಎದುರಾಗಿದೆ. ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್​​ನ ನ್ಯಾ.ಜೆ.ಬಿ.ಪರ್ದಿವಾಲಾ,.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್ ಜೈಲು ಸೇರಬೇಕಾದ ಪರಿಸ್ಥಿತಿ ಬಂದಿದೆ. ದರ್ಶನ್ ವೃತ್ತಿ ಜೀವನದ ಮೇಲೆ ಈ ತೀರ್ಪು ತುಂಬಾನೇ ಪ್ರಭಾವ ಬೀರಲಿದೆ.

ಕಳೆದ ವರ್ಷ ಜೂನ್​ 11ರಂದು ದರ್ಶನ್ ಬಂಧನಕ್ಕೆ ಒಳಗಾದರು. ಆ ಬಳಿಕ ನಾಲ್ಕು ತಿಂಗಳಿಗೂ ಅಧಿಕ ಸಮಯ ಅವರು ಜೈಲಿನಲ್ಲಿ ಇರಬೇಕಾದ ಸ್ಥಿತಿ ಬಂದೊದಗಿತ್ತು. ಆ ಬಳಿಕ ಬೆನ್ನು ನೋವಿನ ಕಾರಣ ನೀಡಿ ಜೈಲಿನಿಂದ ಹೊರ ಬಂದರು. ಡಿಸೆಂಬರ್​ನಲ್ಲಿ ಅವರಿಗೆ ಸಂಪೂರ್ಣ ಜಾಮೀನು ದೊರೆಯಿತು. ಇದನ್ನು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್​ ಬಳಿ ಪ್ರಶ್ನೆ ಮಾಡಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!